Saturday, December 10, 2022
spot_img
Homeಸುದ್ದಿಇಂದು ಕಾಂಗ್ರೆಸ್‌ ಅಧ್ಯಕ್ಷ ಆಯ್ಕೆ ಚುನಾವಣೆ

ಇಂದು ಕಾಂಗ್ರೆಸ್‌ ಅಧ್ಯಕ್ಷ ಆಯ್ಕೆ ಚುನಾವಣೆ

ಖರ್ಗೆ ಪರ ಇದೆ ಅಲೆ; ಗೆದ್ದರೆ ಕರ್ನಾಟಕಕ್ಕೆ ಅಧ್ಯಕ್ಷಗಿರಿ ಕಿರೀಟ

ಹೊಸದಿಲ್ಲಿ: ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕಾಗಿ ಸೋಮವಾರ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಹಣಾಹಣಿ ಏರ್ಪಟ್ಟಿದ್ದು, ಯಾರು ಗೆದ್ದರೂ 24 ವರ್ಷಗಳ ನಂತರ ಪಕ್ಷ ಗಾಂಧಿಯೇತರ ಅಧ್ಯಕ್ಷರನ್ನು ಹೊಂದಲಿದೆ.
9,000 ಪ್ರದೇಶ ಕಾಂಗ್ರೆಸ್ ಸಮಿತಿ ಪ್ರತಿನಿಧಿಗಳು ರಹಸ್ಯ ಮತದಾನದಲ್ಲಿ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ. ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿಗೆ ನಡೆಯುತ್ತಿರುವ ಚುನಾವಣಾ ಸ್ಪರ್ಧೆಯಲ್ಲಿ ಎಐಸಿಸಿ ಕೇಂದ್ರ ಕಚೇರಿ ಮತ್ತು ದೇಶದಾದ್ಯಂತ 65ಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.
ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮತ ಚಲಾಯಿಸುವ ನಿರೀಕ್ಷೆಯಿದೆ. ರಾಹುಲ್ ಗಾಂಧಿ ಅವರು ಪಿಸಿಸಿ ಪ್ರತಿನಿಧಿಗಳಾದ ಸುಮಾರು 40 ಭಾರತ ಜೋಡೋ ಯಾತ್ರಿಗಳೊಂದಿಗೆ ಬಳ್ಳಾರಿಯ ಸಂಗನಕಲ್ಲು ಭಾರತ್ ಜೋಡೊ ಯಾತ್ರಾ ಶಿಬಿರದಲ್ಲಿ ಮತ ಚಲಾಯಿಸಲಿದ್ದಾರೆ.
ತರೂರ್ ತಾನು ಬದಲಾವಣೆಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದಾಗಿ ಹೇಳುತ್ತಿದ್ದರೂ ಗಾಂಧಿಗಳ ಆಪ್ತ ಹಾಗೂ ಹಿರಿಯ ನಾಯಕರ ಬೆಂಬಲವಿರುವ ಖರ್ಗೆ ಗೆಲ್ಲುವ ಅಭ್ಯರ್ಥಿ ಎಂದು ಪರಿಗಣಿಸಲಾಗಿದೆ. ಅ. 19ರಂದು ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.

LEAVE A REPLY

Please enter your comment!
Please enter your name here

Most Popular

error: Content is protected !!