Saturday, December 10, 2022
spot_img
Homeಸುದ್ದಿಸುರತ್ಕಲ್‌ ಟೋಲ್‌ಗೇಟ್‌ ತೆರವಿಗೆ ಇನ್ನೂ 15 ದಿನ ಬೇಕಂತೆ

ಸುರತ್ಕಲ್‌ ಟೋಲ್‌ಗೇಟ್‌ ತೆರವಿಗೆ ಇನ್ನೂ 15 ದಿನ ಬೇಕಂತೆ

ಸಮಯಾವಕಾಶ ಕೇಳಿದ ಟೋಲ್‌ ಅಧಿಕಾರಿಗಳು

ಮಂಗಳೂರು: ಸುರತ್ಕಲ್‌ನ ಎನ್‌ಐಟಿಕೆ ಬಳಿಯ ಟೋಲ್‌ಗೇಟ್ ತೆರವುಗೊಳಸಿಉವ ಹೋರಾಟ ತೀವ್ರತೆ ಪಡೆಯುತ್ತಿರುವಂತೆಯೇ ಅಧಿಕಾರಿಗಳು ತೆರವಿಗೆ 15 ದಿನದ ಕಾಲಾವಕಾಶ ಕೋರಿದ್ದಾರೆ. ಮಂಗಳವಾರ ಟೋಲ್‌ಗೇಟ್‌ ಮುತ್ತಿಗೆ ಹಾಕಲು ಹೋರಾಟಗಾರರು ತಯಾರಿ ನಡೆಸಿರುವಂತೆಯೇ ಟೋಲ್‌ಗೇಟ್‌ ಶಾಶ್ವತವಾಗಿ ಮುಚ್ಚುವ ಪ್ರಕ್ರಿಯೆ ಆರಂಭವಾಗಿದೆ ಎಂಬ ಹೇಳಿಕೆ ಹೊರಬಿದ್ದಿದೆ.
ಈ ಕುರಿತು ಮಾತನಾಡಿರುವ ಸಂಸದ ನಳಿನ್‌ ಕುಮಾರ್‌ ಕಟೀಲು, ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕೂಡ ಲೋಕಸಭೆಯಲ್ಲಿ ಟೋಲ್‌ಗೇಟ್ ತೆರವು ಬಗ್ಗೆ ಪ್ರಸ್ತಾವ ಮಾಡಿದ್ದರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ತೆರವಿಗಾಗಿ ಕೆಲವು ಸಭೆಗಳನ್ನು ನಡೆಸಲಾಗಿದೆ. ಜಿಲ್ಲಾಡಳಿತ ಇತ್ತೀಚೆಗೆ ಸಭೆ ನಡೆಸಿದಾಗಲೂ ಟೋಲ್‌ಗೇಟ್ ರದ್ದತಿಗೆ 15 ದಿನಗಳ ಕಾಲಾವಕಾಶದ ಬಗ್ಗೆ ಎನ್‌ಎಚ್‌ಐಎ ಅಧಿಕಾರಿಗಳು ಕೋರಿದ್ದರು. ಸಹಾಯಕ ಕಮಿಷನರ್ ನೇತೃತ್ವದಲ್ಲಿ ಟೋಲ್ ಹೋರಾಟಗಾರರ ಸಭೆ ನಡೆಸಿ ಅವರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿತ್ತು ಎಂದರು.
ಕೆಲವೊಂದು ತಾಂತ್ರಿಕ ಕಾರಣಕ್ಕೆ ಸುರತ್ಕಲ್ ಟೋಲ್‌ಗೇಟ್ ರದ್ದತಿ ವಿಳಂಬವಾಗುತ್ತಿದೆ. ಮುಂದಕ್ಕೆ ರಸ್ತೆ ನಿರ್ವಹಣೆಯ ಪ್ರಶ್ನೆಯೂ ಒಳಗೊಂಡಿದೆ. ಇದೆಲ್ಲದಕ್ಕೆ ಪರಿಹಾರ ಕಂಡುಕೊಂಡು 15 ದಿನಗಳಲ್ಲಿ ಟೋಲ್‌ಗೇಟ್ ರದ್ದತಿ ವಿಚಾರ ತಾರ್ಕಿಕ ಅಂತ್ಯ ಕಾಣಲಿದೆ. ಟೋಲ್‌ಗೇಟ್ ತೆರವು ವಿಚಾರದಲ್ಲಿ ನಾವು ಯಾವುದೇ ರಾಜಕೀಯ ಮಾಡುತ್ತಿಲ್ಲ, ರಾಜಕೀಯೇತರ ಹೋರಾಟಕ್ಕೆ ನಮ್ಮ ವಿರೋಧ ಇಲ್ಲ ಎಂದಿದ್ದಾರೆ ನಳಿನ್‌.
ಈ ಟೋಲ್‌ಗೇಟ್ ಅನ್ನು ಯುಪಿಎ ಅವಧಿಯಲ್ಲಿ ಆಸ್ಕರ್ ಫೆರ್ನಾಂಡಿಸ್ ಹೆದ್ದಾರಿ ಸಚಿವರಾಗಿದ್ದಾಗ ಸ್ಥಾಪಿಸಲಾಗಿದೆ. ನಿಗದಿತ ಇಂತಿಷ್ಟು ಕಿ.ಮೀ. ಅಂತರದಲ್ಲಿ ಟೋಲ್‌ಗೇಟ್ ಸ್ಥಾಪಿಸಬೇಕು ಎಂಬ ನಿಯಮದ ಕಾರಣ ಈಗ ಅದನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಆದರೆ ಹೋರಾಟದಲ್ಲಿ ರಾಜಕೀಯ ಪ್ರವೇಶವಾದರೆ ಬಿಜೆಪಿ ಕೂಡ ಯುಪಿಎ ಅವಧಿಯಲ್ಲಿ ಟೋಲ್‌ಗೇಟ್ ಸ್ಥಾಪಿಸಿದ ವಿಷಯ ಪ್ರಸ್ತಾವಿಸಬೇಕಾಗುತ್ತದೆ. ಟೋಲ್‌ಗೇಟ್ ರದ್ದತಿ ವಿಚಾರದಲ್ಲಿ ಹೋರಾಟದಲ್ಲಿ ರಾಜಕೀಯಕ್ಕೆ ಅವಕಾಶ ನೀಡಬಾರದು ಎಂದರು.

LEAVE A REPLY

Please enter your comment!
Please enter your name here

Most Popular

error: Content is protected !!