ಇಂದು ಕೇಂದ್ರದಿಂದ ರೈತರಿಗೆ ದೀಪಾವಳಿ ಉಡುಗೊರೆ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 4 ಸಾವಿರ ರೂ. ಖಾತೆಗಳಿಗೆ ಜಮೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ ಇಂದು ಮೋದಿ ಸರ್ಕಾರದಿಂದ ದೀಪಾವಳಿ ಉಡುಗೊರೆ ಲಭ್ಯವಾಗಲಿದೆ. 10 ಕೋಟಿಗೂ ಹೆಚ್ಚು ರೈತರ ಖಾತೆಗೆ 2-2 ಸಾವಿರ ರೂಪಾಯಿಗಳನ್ನು ವರ್ಗಾವಣೆಯಾಗಲಿದೆ. ಈ ಹಣ ಪಿಎಂ ಕಿಸಾನ್‌ನ 12ನೇ ಕಂತಿನ ರೂಪದಲ್ಲಿ ಫಲಾನುಭವಿಗಳಿಗೆ ಸಿಗಲಿದೆ.
ಅ.17 ರಂದು ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಸಿಎಆರ್) ಪುಸಾದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ರೈತರಿಗೆ 12 ನೇ ಕಂತು ಬಿಡುಗಡೆ ಮಾಡಲಿದ್ದಾರೆ. ಡಿಬಿಟಿಯಿಂದ 16 ಸಾವಿರ ಕೋಟಿ ರೂ. ರೈತರ ಖಾತೆಗೆ ವರ್ಗಾವಣೆಯಾಗಲಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.
ರೈತರ ಖಾತೆ ಸೇರಲಿದೆ 4000 ರೂ. ಜಮೆಯಾಗಲಿದೆ. ಆದರೆ ಪಿಎಂ ಕಿಸಾನ್ ಯೋಜನೆಯಲ್ಲಿ ಇ-ಕೆವೈಸಿ ಪೂರ್ಣಗೊಳಿಸದ ರೈತರಿಗೆ 12ನೇ ಕಂತಿನ ಹಣ ನೀಡಲಾಗುವುದಿಲ್ಲ ಎಂದು ಈಗಾಗಲೇ ಸರ್ಕಾರ ಸ್ಪಷ್ಟಪಡಿಸಿದೆ.

Latest Articles

error: Content is protected !!