ರಾಜ್ಯಮಟ್ಟದ ಕುಸ್ತಿಯಲ್ಲಿ ಕ್ರೈಸ್ಟ್‌ಕಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಗೆ ಬೆಳ್ಳಿಪದಕ

0

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇದರ ವತಿಯಿಂದ ಡಿ.ಎಸ್.ಕುರ್ತಕೋಟಿ ಮೆಮೋರಿಯಲ್ ಪದವಿಪೂರ್ವ ವಾಣಿಜ್ಯ ಕಾಲೇಜು, ಬೆಟಗೇರಿ, ಗದಗ ಜಿಲ್ಲೆ ಇದರ ಆಶ್ರಯದಲ್ಲಿ ನಡೆದ ಪದವಿಪೂರ್ವ ವಿಭಾಗದ ಬಾಲಕ ಬಾಲಕಿಯರ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಪ್ರಥಮ ವಾಣಿಜ್ಯ ವಿಭಾಗದ ರಚನಾ ಪದ್ಮಶಾಲಿ ಹಾಗೂ ದ್ವಿತೀಯ ವಿಜ್ಞಾನ ವಿಭಾಗದ ಮಿಶಲ್ ಡಿ’ಸೋಜ ದ್ವಿತೀಯ ಸ್ಥಾನ ಪಡೆಯುವ ಮೂಲಕ ಬೆಳ್ಳಿ ಪದಕ ಪಡೆದುಕೊಂಡಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಕು.ಲಾವಣ್ಯ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದರು.

Previous articleನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಶಿಲ್ಪಿ ರಾಮಚಂದ್ರ ಆಚಾರ್ಯ ಪುನರಾಯ್ಕೆ
Next articleಬೆಸ್ಕಾಂನಲ್ಲಿ 400 ಅಪ್ರೆಂಟಿಸ್​ ಹುದ್ದೆಗೆ ಅರ್ಜಿ ಆಹ್ವಾನ

LEAVE A REPLY

Please enter your comment!
Please enter your name here