ಶಾಸಕ ಹರೀಶ್‌ ಪೂಂಜಾಗೆ ಬೆದರಿಕೆ ಪ್ರಕರಣ-ತನಿಖೆಯನ್ನು ಸಿಐಡಿಗೆ ಒಪ್ಪಿಸಿದ ಸರಕಾರ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.
ಅ. 13ರಂದು ರಾತ್ರಿ ಶಾಸಕ ಹರೀಶ್ ಪೂಂಜಾ ಅವರು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಬಳಿಕ ಮಂಗಳೂರಿನಿಂದ ಬೆಳ್ತಂಗಡಿಗೆ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ರಾತ್ರಿ 11.15ರ ವೇಳೆಗೆ ಫರಂಗಿಪೇಟೆ ಬಳಿ ದುಷ್ಕರ್ಮಿಗಳು ಶಾಸಕರ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿದ್ದರು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಮಂಗಳೂರು ಫಳ್ನೀರ್ ನಿವಾಸಿ ರಿಯಾಝ್ (38) ಎಂಬವರನ್ನು ಬಂಧಿಸಿದ್ದರು. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.













































































































































































error: Content is protected !!
Scroll to Top