ಹೆಬ್ರಿ: ಶಿವಪುರ ಗ್ರಾಮದ ಮುಳ್ಳುಗುಡ್ಡೆ ಎಂಬಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಸಂಭವಿಸಿದೆ. ಮುಳ್ಳುಗುಡ್ಡೆ ಕಾಳಾಯಿಯ ನಾರಾಯಣ ಶೆಟ್ಟಿಗಾರ (73 ವ.) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ನೊಂದು ಮನೆಯ ಪಕ್ಕದ ರಬ್ಬರ್ ತೋಟದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಗೆ ಹಾರಿ ಆತ್ಮಹತ್ಯೆ



































































