ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಬಿ.ಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೊಮಾ ಮತ್ತಿತರ ಪದವಿ ಹೊಂದಿದವರಿಗೆ ನೌಕರಿ ಪಡೆಯುವ ಅವಕಾಶ
ಉಡುಪಿ: ಉಡುಪಿಯಲ್ಲಿ ಅ.19ರಂದು ಮಿನಿ ಉದ್ಯೋಗ ಮೇಳ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿ ಜತೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಬೆಳಗ್ಗೆ 10.30ಕ್ಕೆ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಬಿ.ಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೊಮಾ ಹಾಗೂ ಇತರ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 8105618291, 9945856670, 8197440155, 9901472710.









































