ಭೂತಕೋಲ ಹಿಂದೂ ಸಂಸ್ಕೃತಿಯಲ್ಲ- ನಟ ಚೇತನ್ ಕುಮಾರ್

ಬೆಂಗಳೂರು: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಪ್ಯಾನ್ ಇಂಡಿಯಾ ಸಿನಿಮಾವಾಗಿ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಎಲ್ಲೆಡೆಯೂ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದೆ. 

ಅದರಲ್ಲೂ  ಈ ಸಿನಿಮಾದಲ್ಲಿ ಭೂತಕೋಲ, ಕರಾವಳಿ ಭಾಗದ ದೈವಗಳ ಆರಾಧನೆ, ಚಿತ್ರ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇದರ ಸುತ್ತಲೂ ಚರ್ಚೆ, ವಿಮರ್ಶೆಗಳು ನಡೆಯುತ್ತಿದೆ. ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಕುಮಾರ್ ಅಲ್ಲಗಳೆದಿದ್ದಾರೆ.

ರಿಷಬ್ ಶೆಟ್ಟಿ ಅವರ ಮಾತು ಸುಳ್ಳು, ನಮ್ಮ ಪಂಬದ, ನಲಿಕೆ, ಪರವರ ಬಹುಜನ ಸಂಪ್ರದಾಯಗಳು. ವೈದಿಕ ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಹಿಂದಿನವು. ಮೂಲ ನಿವಾಸಿ ಸಂಸ್ಕೃತಿಗಳನ್ನು ಪರದೆ ಮೇಲೆ ಮತ್ತು ಹೊರಗೆ ಸತ್ಯದೊಂದಿಗೆ ಪ್ರದರ್ಶಿಸಬೇಕು ಎಂದು ಅವರು ಟ್ವೀಟ್ ನಲ್ಲಿ ಕೋರಿದ್ದಾರೆ.













































error: Content is protected !!
Scroll to Top