Tuesday, December 6, 2022
spot_img
HomeUncategorizedನಟ ಚೇತನ್‌ ವಿರುದ್ಧ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

ನಟ ಚೇತನ್‌ ವಿರುದ್ಧ ಕಾರ್ಕಳ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

ಕಾರ್ಕಳ : ಭೂತ ಕೋಲದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಹಿಂದೂ ಧರ್ಮೀಯರ ಭಾವನೆಗಳಿಗೆ ಪದೇ ಪದೇ ಧಕ್ಕೆ ತರುತ್ತಿರುವ ಕನ್ನಡದ ನಟ ಚೇತನ್ ವಿರುದ್ಧ ಹಿಂದು ಜಾಗರಣ ವೇದಿಕೆ‌ಯು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದೆ. ಸಹಕಾರಿ ಧುರೀಣ ಬೋಳ ಸದಾಶಿವ ಶೆಟ್ಟಿ, ಕೆಎಂಎಫ್‌ ನಿರ್ದೇಶಕ ನರಸಿಂಹ ಕಾಮತ್‌, ಹಿಂದು ಜಾಗರಣ ವೇದಿಕೆ ಕಾರ್ಕಳ ನಗರ ಸಂಯೋಜಕ್ ಸಂದೀಪ್ ಕಾರ್ಲ, ದೀಪಕ್ ಬೈಲೂರು, ಸುಭಾಶ್ಚಂದ್ರ ಹೆಗ್ಡೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಲ್ಕೆ ಸಮುದಾಯದ ದೀಪಕ್ ಕಿರಣ್ ಎಂಬುವವರು ಕೂಡ ನಗರ ಪೊಲೀಸ್‌ ಠಾಣೆಗೆ ದೂರು ನೀಡಿರುತ್ತಾರೆ.

LEAVE A REPLY

Please enter your comment!
Please enter your name here

Most Popular

error: Content is protected !!