24 ವರ್ಷಗಳ ನಂತರ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಕರ್ನಾಟಕ ಮೂಲಕ, ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.
ಚಲಾವಣೆಯಾದ ಒಟ್ಟು 9.385 ಮತಗಳಲ್ಲಿ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ 7 ಸಾವಿರದ 897 ಮತಗಳು, ಸಂಸದ ಶಶಿ ತರೂರ್ ಪರವಾಗಿ ಸಾವಿರದ 072 ಮತಗಳು ಲಭಿಸಿವೆ. ಇನ್ನು 400ಕ್ಕೂ ಹೆಚ್ಚು ಮತಗಳು ತಿರಸ್ಕೃತಗೊಂಡಿವೆ.
ಈ ಮೂಲಕ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಸ್ಥಾನದಲ್ಲಿ ಮಲ್ಲಿಕಾರ್ಜುವ ಖರ್ಗೆಯವರು ಕೂರಲಿದ್ದು, 24 ವರ್ಷಗಳ ನಂತರ ಗಾಂಧಿಯೇತರರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ಮಲ್ಲಿಕಾರ್ಜುನ ಖರ್ಗೆಯವರಿಗೆ ಪರಾಜಿತ ಅಭ್ಯರ್ಥಿ ಶಶಿ ತರೂರ್ ಅಭಿನಂದನೆ ಸಲ್ಲಿಸಿದ್ದಾರೆ. ಪಕ್ಷದ ಪುನರುಜ್ಜೀವನ ಆರಂಭವಾಗಿದೆ ಎಂದು ನಾನು ನಂಬುತ್ತೇನೆ ಎಂದು ಹೇಳಿಕೆಯಲ್ಲಿ ಶಶಿ ತರೂರ್ ಹೇಳಿದ್ದಾರೆ. ಮೊನ್ನೆ ಮತದಾನದ ದಿನವೂ ಶಶಿ ತರೂರ್ ಈ ಮಾತುಗಳನ್ನು ಹೇಳಿದ್ದರು.

ಕರ್ನಾಟಕ ಮೂಲದವರಾದ ಖರ್ಗೆಯವರ ಗೆಲುವಿಗೆ ಕರ್ನಾಟಕ, ಅವರ ಊರು ಮತ್ತು ದೆಹಲಿಯಲ್ಲಿ ಅವರ ಕಚೇರಿ ಮುಂದೆ ಬೆಂಬಲಿಗರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

Latest Articles

error: Content is protected !!