Thursday, December 1, 2022
spot_img
Homeಸುದ್ದಿನಿಟ್ಟೆ ವಿದ್ಯಾಲಯ ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕ ಅವಕಾಶ ಕಲ್ಪಿಸಿದೆ

ನಿಟ್ಟೆ ವಿದ್ಯಾಲಯ ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕ ಅವಕಾಶ ಕಲ್ಪಿಸಿದೆ

ಜಪಾನ್‌ನ ನಿಡ್ಯಾಕ್-ರೀಡ್ ಕಂಪೆನಿಯ ಸೆಂಟರ್ ಆಫ್ ಎಕ್ಸಲೆನ್ಸ್ ಉದ್ಘಾಟಿಸಿ ಹಿಡೆಕಾಜು ಯಮಜಕಿ

ಕಾರ್ಕಳ: ‘ಭಾರತ ದೇಶದ ಪ್ರತಿ‍ಷ್ಟಿತ ವಿದ್ಯಾಸಂಸ್ಥೆಗಳಲ್ಲೊಂದಾಗಿರುವ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದೊಂದಿಗೆ ನಿಡ್ಯಾಕ್ ರೀಡ್ ಸಂಸ್ಥೆಯು ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡಿದ್ದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ವಿದ್ಯಾಲಯದ ಹಲವಾರು ಪ್ರತಿಭಾನ್ವಿತ ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕವಾದ ಅವಕಾಶಗಳನ್ನು ಕಲ್ಪಿಸಿದೆ ಎಂದು ಹಿಡೆಕಾಜು ಯಮಜಕಿ ಹೇಳಿದರು.
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಜಪಾನಿನ ನಿಡ್ಯಾಕ್-ರೀಡ್ ಕಾರ್ಪೋರೇಶನ್ ಸಂಸ್ಥೆಯ ಸಹಯೋಗದಲ್ಲಿ ನಿಟ್ಟೆ ಕ್ಯಾಂಪಸ್ ನಲ್ಲಿ ನಿಡ್ಯಾಕ್-ರೀಡ್ ಸೆಂಟರ್ ಆಫ್ ಎಕ್ಸಲೆನ್ಸ್ ನ್ನು ಆರಂಭಿಸಿದ್ದು ಅ.18ರಂದು ಇದನ್ನು ಉದ್ಘಾಟಿಸಿ ಮಾತಾನಾಡಿದ ನಿಡ್ಯಾಕ್-ರೀಡ್ ಸಂಸ್ಥೆಯ ನಿರ್ದೇಶಕ ಹಿಡೆಕಾಜು ಯಮಜಕಿ, ಸಂಸ್ಥೆಯು ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಹಾಗೂ ಉದ್ಯೋಗಾವಕಾಶಗಳನ್ನು ನೀಡಲು ಸದಾ ಸಿದ್ದವಿದೆ ಈ ಮೂಲಕ ನಿಟ್ಟೆ ವಿದ್ಯಾಸಂಸ್ಥೆಯೊಂದಿಗಿನ ಬಾಂಧವ್ಯ ಹಾಗೂ ನಿಡ್ಯಾಕ್ ಸಂಸ್ಥೆಯ ತಾಂತ್ರಿಕ ಕೌಶಲ್ಯಗಳು ಬಲವರ್ಧನೆಗೊಳ್ಳಲಿದೆ’ ಎಂದರು.

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಶ್ರೀ ಎನ್. ವಿನಯ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ‘ಇಂತಹ ಸೆಂಟರ್ ಆಫ್ ಎಕ್ಸಲೆನ್ಸ್ ನಿಂದ ಸಂಸ್ಥೆಯ ವಿದ್ಯಾರ್ಥಿಗಳಿಗೆ ತಮ್ಮ ಕೌಶಲ್ಯಗಳನ್ನು ವೃದ್ದಿಸಲು ಉತ್ತಮ ವೇದಿಕೆ ಸಿಗಲಿದೆ. ನಿಡ್ಯಾಕ್ ಕಂಪೆನಿಯೊಂದಿಗಿನ ಒಡನಾಟ ಹೀಗೆ ಮುಂದುವರೆಯಲಿ, ವಿದ್ಯಾರ್ಥಿಗಳ ಹಾಗೂ ಸಮಾಜದ ಏಳಿಗೆಯ ದೃಷ್ಠಿಯಿಂದ ಈ ಕಂಪೆನಿಯೊಂದಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಶೋಧನಾ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಯೋಜನೆ ನಮ್ಮ ಸಂಸ್ಥೆಗಿದೆ’ ಎಂದರು.

ಈ ಸೆಂಟರ್ ಆಫ್ ಎಕ್ಸಲೆನ್ಸ್ ನ ಪ್ರಥಮ ಯೋಜನೆಯಡಿಯಲ್ಲಿ ಸಾಫ್ಟ್ ವೇರ್ ಡೆವಲಪ್ಮೆಂಟ್ ಹಾಗೂ ಮೆಕ್ಯಾನಿಕಲ್ ಡಿಸೈನ್ಸ್ ಕಾರ್ಯವನ್ನು ಆರಂಭಿಸಲಾಯಿತು. ಈ ಸಂದರ್ಭದಲ್ಲಿ ನಿಡ್ಯಾಕ್-ರೀಡ್ ಸಂಸ್ಥೆಯ ಉಪನಿರ್ದೇಶಕ ತಕಶಿ ಮಿಕಿ, ಬೋರ್ಡ್ ಟೆಸ್ಟ್ ವಿಭಾಗದ ವ್ಯವಸ್ಥಾಪಕ ತದಕಜು ಮಿಯಟಕೆ ಹಾಗೂ ಹ್ಯೂಮನ್ ರಿಸೋರ್ಸ್ ವಿಭಾಗದ ಗ್ರೂಪ್ ಲೀಡ್ ಕತ್ಸುಮಿ ಕಸನೊ, ನಿಟ್ಟೆ ವಿಶ್ವವಿದ್ಯಾಲಯದ ಪ್ರೊ-ಚಾನ್ಸಲರ್ ಗಳಾದ ಪ್ರೊ. ಡಾ. ಶಾಂತರಾಮ್ ಶೆಟ್ಟಿ, ವಿಶಾಲ್ ಹೆಗ್ಡೆ, ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ.ಸತೀಶ್ ಕುಮಾರ್ ಭಂಡಾರಿ, ಪ್ರೊ- ವೈಸ್ ಚಾನ್ಸಲರ್ ಡಾ.ಎಂ.ಎಸ್ ಮೂಡಿತ್ತಾಯ, ಕುಲಸಚಿವ ಡಾ.ಹರ್ಷ ಹಾಲಹಳ್ಳಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಫ್ಳೂಣ್ಕರ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು, ಅಂತಾರಾ‍ಷ್ಟ್ರೀಯ ಸಹಯೋಗ ವಿಭಾಗದ ನಿರ್ದೇಶಕ ಪ್ರೊ.ಹರಿಕೃಷ್ಣ ಭಟ್ ವಂದಿಸಿದರು.

LEAVE A REPLY

Please enter your comment!
Please enter your name here

Most Popular

error: Content is protected !!