ಅ. 31ರೊಳಗೆ ಅರ್ಜಿ ಸಲ್ಲಿಸಬೇಕು
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಮೀಸಲು ಪಡೆ ಮತ್ತು ಸಿವಿಲ್ ಪೊಲೀಸ್ ವಿಭಾಗದಲ್ಲಿ ಃಉದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಶಸ್ತ್ರ ಮೀಸಲು ಪಡೆಯಲ್ಲಿರುವ 3,484 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಆರಂಭ: ಅ.19, 2022
ಕೊನೆಯ ದಿನಾಂಕ: ಅ. 31, 2022
ಶುಲ್ಕ ಪಾವತಿಗೆ ಕೊನೆಯ ದಿನ: ನ.3, 2022
ಹುದ್ದೆಗಳ ವಿವರ
ಒಟ್ಟು 3,484 ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್ (ಸಿಎಆರ್/ಡಿಎಆರ್) ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕಲ್ಯಾಣ-ಕರ್ನಾಟಕದ ಅಭ್ಯರ್ಥಿಗಳಿಗೆ 420 ಹುದ್ದೆಗಳನ್ನು ಮೀಸಲಿಡಲಾಗಿದೆ. ಈ ಹುದ್ದೆಗಳಿಗೆ ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯ ಲಿಂಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 79 ತೃತೀಯ ಲಿಂಗ ಪುರುಷ ಅಭ್ಯರ್ಥಿಗಳಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅವಕಾಶ ದೊರಕಲಿದೆ.
ವಿದ್ಯಾರ್ಹತೆ
ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ತತ್ಸಮಾನ ವಿದ್ಯಾರ್ಹತೆ ಎಂದರೆ ಸಿಬಿಎಸ್‌ಇ, ಐಸಿಎಸ್‌ಇ ಮಂಡಳಿಗಳು, ಇತರ ರಾಜ್ಯ ಸರಕಾರದ ಪರೀಕ್ಷಾ ಮಂಡಳಿಗಳು ನಡೆಸುವ 10ನೇ ತರಗತಿ ಪರೀಕ್ಷೆ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಕೋರ್ಸ್ ಅಥವಾ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್ (ಕೆಒಎಸ್) ವಿದ್ಯಾರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ
18ರಿಂದ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ ಪಂಗಡ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಎರಡು ವರ್ಷ ಹಾಗೂ ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಶುಲ್ಕ
ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು 400 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ಇದೆ. ಆನ್‌ಲೈನ್ ಮೂಲಕ ಪಾವತಿಸಬಹುದು ಹಾಗೂ ಚಲನ್ ಡೌನ್‌ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು. ಸೇವಾ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.
ದೈಹಿಕ ಅರ್ಹತೆ
ಪುರುಷ ಅಭ್ಯರ್ಥಿಗಳು ಕನಿಷ್ಠ 168 ಸೆಂ.ಮೀ. ಎತ್ತರ ಇರಬೇಕು ಮತ್ತು 86 ಸೆಂ.ಮೀ. ಎದೆ ಸುತ್ತಳತೆ ಹೊಂದಿರಬೇಕು. ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 2022ರ ಅಕ್ಟೋಬರ್ 31ರೊಳಗೆ ಅಭ್ಯರ್ಥಿಗಳು ನಿಗದಿತ ವಿದ್ಯಾರ್ಹತೆಗೆ ಸಂಬಂಧಿಸಿದ ಪರೀಕ್ಷೆಯ ಅಂಕಪಟ್ಟಿಯನ್ನು ಹೊಂದಿರಬೇಕು. ಒಬ್ಬರು ಒಂದು ಅರ್ಜಿ ಸಲ್ಲಿಸಲು ಮಾತ್ರ ಅವಕಾಶ. ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದ್ದಲ್ಲಿ ಒಂದು ಅರ್ಜಿಯನ್ನು ಮಾತ್ರ ಪರಿಗಣಿಸಲಾಗುತ್ತದೆ.
ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:5 ಅನುಪಾತದಲ್ಲಿ ದೇಹ ದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಆಯ್ಕೆ ಮಾಡಲಾಗುತ್ತದೆ.
ವೆಬ್‌ಸೈಟ್: https://ksp-recruitment.in/