ಅ.28 ರಿಂದ ಸುರತ್ಕಲ್‌ ಟೋಲ್‌ ಗೇಟ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಂಗಳೂರು: ಸುರತ್ಕಲ್‌ನಲ್ಲಿ ಅಕ್ರಮ ಎಂದು ಹೇಳಲಾಗುತ್ತಿರುವ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಟೋಲ್ ವಿರೋಧಿ ಸಮಿತಿ ಸಾಕಷ್ಟು ವರ್ಷಗಳಿಂದ ಹೋರಾಟ ನಡೆಸುತ್ತಿದೆ. ಕಳೆದ ಎರಡು ಮೂರು ದಿನಗಳಿಂದ ಹೋರಾಟದ ಸ್ವರೂಪ ತ್ರೀವಗತಿಯನ್ನು ಪಡೆಯುತ್ತಿದ್ದು, ಸಮಿತಿಯು ಅ.28 ರಿಂದ ಟೋಲ್‌ ಗೇಟ್‌ ಎದುರು ಅಹೋರಾತ್ರಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ಇಂದು ಸುರತ್ಕಲ್‌ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಹೋರಾಟ ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ನಡುವೆ ಸುರತ್ಕಲ್‌ ಟೋಲ್‌ ಗೇಟ್‌ ನಲ್ಲಿ ಎಂದಿನಂತೆ ಟೋಲ್‌ ಸಂಗ್ರಹ ಮುಂದುವರಿದಿದೆ. ಸ್ಥಳದಲ್ಲಿ ಕೆ.ಎಸ್‌.ಆರ್‌.ಪಿ. ತುಕಡಿಗಳು ಮತ್ತು ಸುರತ್ಕಲ್‌ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ಸುಮಾರು 100 ಪೋಲಿಸರನ್ನು ನಿಯೋಜಿಸಲಾಗಿದೆ.



































































































































error: Content is protected !!
Scroll to Top