ಸುನಿಲ್‌ ಕುಮಾರ್‌ಗೆ ಪ್ರಾಧಿಕಾರದ ಜವಾಬ್ದಾರಿ

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಅಧಿಕಾರ ಅವಧಿ ಅ.14ಕ್ಕೆ ಮುಕ್ತಾಯಗೊಂಡಿದ್ದು, ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರಾಗುವವರೆಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ ಕುಮಾರ್‌ ಅವರು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಈ ಕುರಿತು ಸರಕಾರ ಆದೇಶ ಹೊರಡಿಸಿದ್ದು, ರಾಜ್ಯಪಾಲರು ಈ ಆದೇಶಕ್ಕೆ ಒಪ್ಪಿಗೆ ನೀಡಿದ್ದಾರೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Latest Articles

error: Content is protected !!