60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ 2 ಸಾವಿರ ರೂ. ಮಾಸಾಶನ – ಸುನೀಲ್‌ ಕುಮಾರ್‌ ಘೋಷಣೆ

ಬೆಂಗಳೂರು : 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಮಾಸಾಶನ ನೀಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ ಕುಮಾರ್‌ ಘೋಷಣೆ ಮಾಡಿದ್ದಾರೆ. ಪ್ರತಿ ತಿಂಗಳು 2 ಸಾವಿರ ನೀಡಲು ಸರಕಾರ ನಿರ್ಧರಿಸಿದ್ದು, ಈ ಮೂಲಕ ಕರಾವಳಿ ಭಾಗದ ದೈವ ನರ್ತಕರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಈ ವೇಳೆ ಮಾತನಾಡಿದ ಸಚಿವ ಸುನೀಲ್‌ ಕುಮಾರ್‌ ಭೂತಾರಾಧನೆ ಹಿಂದೂ ಸಂಸ್ಕೃತಿಯ ಭಾಗ. ತುಳುನಾಡಿನ ದೈವಾರಾಧನೆ ಬಗ್ಗೆ ಯಾರೋ ಒಬ್ಬ ವ್ಯಕ್ತಿ ಏನೋ ಹೇಳಿದ್ರೆ ಆ ಸಂಸ್ಕೃತಿಯಿಂದ ಯಾರೂ ದೂರ ಆಗಲು ಸಾಧ್ಯವಿಲ್ಲ ಎಂದು ಸಚಿವ ಸುನೀಲ್‌ ಕುಮಾರ್‌ ಅಭಿಪ್ರಾಯಪಟ್ಟರು.
ಕಾಂತಾರ ಸಿನಿಮಾ ಯಶಸ್ಸಿನ ಬಳಿಕ ಇದೀಗ ದೈವಾರಾಧನೆ, ದೈವ ನರ್ತಕರು, ತುಳು ಸಂಸ್ಕೃತಿ ಬಗ್ಗೆ ಎಲ್ಲಡೆ ಮಾತು ಕೇಳಿಬರುತ್ತಿದ್ದು, ನಟ ಚೇತನ್‌ ದೈವಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎನ್ನುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೆಲ್ಲದರ ಮಧ್ಯೆ ಇದೀಗ ಸರಕಾರ ಹಿರಿಯ ದೈವನರ್ತಕರಿಗೆ ಮಾಸಾಶನ ಘೋಷಣೆ ಮಾಡಿರುವುದು ದೈವನರ್ತಕರಿಗೆ ಸಿಹಿಸುದ್ದಿಯಾಗಿದೆ.







































error: Content is protected !!
Scroll to Top