ತಜ್ಞರ ಸಮಿತಿಯಿಂದ ಅಡಕೆ ಹಳದಿ ಎಲೆ ರೋಗ ಅಧ್ಯಯನ

ಕೇಂದ್ರ ಕೃಷಿ ಇಲಾಖೆಯಿಂದ ಸಮಿತಿ ರಚನೆ

ಹೊಸದಿಲ್ಲಿ: ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಕೇಂದ್ರ ಕೃಷಿ ಸಚಿವಾಲಯ ಆದೇಶ ಹೊರಡಿಸಿದೆ.
ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.
ಈ ತಜ್ಞರ ಸಮಿತಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರ ಪ್ರಕಟಣೆ ತಿಳಿಸಿದೆ.

Latest Articles

error: Content is protected !!