Thursday, December 1, 2022
spot_img
Homeಸುದ್ದಿಬೆಂಗಳೂರಿನಲ್ಲಿ ಮತ್ತೆ ಭಾರಿ ಮಳೆ

ಬೆಂಗಳೂರಿನಲ್ಲಿ ಮತ್ತೆ ಭಾರಿ ಮಳೆ

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸುರಿದ ಗುಡುಗು ಸಹಿತ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮತ್ತೆ ಪ್ರವಾಹದ ಪರಿಸ್ಥಿತಿ ತಲೆದೋರಿದೆ. ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ರಾತ್ರಿ 9 ಗಂಟೆಗೆ ಆರಂಭವಾದ ಮಳೆ 10-30ವರೆಗೂ ಎಡೆಬಿಡದೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರ ಪರದಾಡುವಂತಾಯಿತು.
ವಿಧಾನಸೌಧ, ಇಂಡಿಯನ್ ಎಕ್ಸ್‌ಪ್ರೆಸ್, ಮೆಜೆಸ್ಟಿಕ್, ಶೇಷಾದ್ರಿಪುರಂ, ಶಾಂತಿನಗರ ಸೇರಿದಂತೆ ಹಲವೆಡೆ ಮಳೆಯಿಂದಾಗಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಮನೆಗೆ ತೆರಳಲು ಹರಸಾಹಸ ಪಟ್ಟರು. ಶಿವಾನಂದ ಸರ್ಕಲ್‌ನ ರೈಲ್ವೆ ಅಂಡರ್ ಪಾಸ್ ಬಳಿ ನದಿಯಂತೆ ನೀರು ಹರಿದು ವಾಹನ ಸವಾರರ ಗೋಳು ಹೇಳ ತೀರದಂತಾಯಿತು.
ಈ ಮಧ್ಯೆ ಶೇಷಾದ್ರಿಪುರಂನ ಜೆಡಿಎಸ್ ಕಚೇರಿ ಬಳಿ ಮೆಟ್ರೊ ಕಾಂಪೌಂಡ್ ಕುಸಿದು ಆರು ಕಾರುಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಕೆಲವೆಡೆ ಮರಗಳು ಧರೆಗುರುಳಿ ಬಿದ್ದಿದ್ದು, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಯಿತು. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು, ನೀರನ್ನು ಹೊರ ಹಾಕಲು ಹೆಣಗಾಡಿದರು.

LEAVE A REPLY

Please enter your comment!
Please enter your name here

Most Popular

error: Content is protected !!