ಬೆಂಗಳೂರು : ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ನ.7 ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)
ಹುದ್ದೆ : Circle Based Officer Posts (CBO)
ಒಟ್ಟು ಹುದ್ದೆ: 1422
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: ನ.7
ವಿದ್ಯಾರ್ಹತೆ: ಅಭ್ಯರ್ಥಿಗಳು ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಪದವಿಯ ಅಂತಿಮ ವರ್ಷ/ಸೆಮಿಸ್ಟರ್ನಲ್ಲಿರುವವರು ಸಂದರ್ಶನಕ್ಕೆ ಕರೆದರೆ, ಅವರು ಸೆ. 31, 2022 ರಂದು ಅಥವಾ ಮೊದಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯನ್ನು ಸಲ್ಲಿಸಬೇಕು.
ವಯೋಮಿತಿ: ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ (ಸೆ 30, 2022ರಂತೆ). ದಿವ್ಯಾಂಗರಿಗೆ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 10 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಮಾಜಿ ಯೋಧ 5, ಹಿಂದುಳಿದ ವರ್ಗ 3 ವರ್ಷ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ, ಸಂದರ್ಶನ. ಕರ್ನಾಟಕದಲ್ಲಿ ಕನ್ನಡ ಅಲ್ಲದೆ ಇಂಗ್ಲೀಷ್, ಹಿಂದಿ ಭಾಷೆಯಲ್ಲೂ ಪರೀಕ್ಷೆ ಬರೆಯಲು ಅವಕಾಶ ಇರಲಿದೆ. 10 ಅಥವಾ 12ನೇ ತರಗತಿಯಲ್ಲಿ ಪ್ರಾದೇಶಿಕ ಭಾಷೆ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೆ ಭಾಷಾ ಪರೀಕ್ಷೆ ಅಗತ್ಯವಿರುವುದಿಲ್ಲ. ಮಿಕ್ಕ ಅಭ್ಯರ್ಥಿಗಳಿಗೆ ಸ್ಥಳೀಯ ಭಾಷಾ ಪರೀಕ್ಷೆಯಲ್ಲಿ ಪಾಸಾದರೆ ಪೂರ್ವಭಾವಿ ಪರೀಕ್ಷೆಗೆ ಅರ್ಹತೆ ಸಿಗಲಿದೆ.
ಆನ್ಲೈನ್ ನೋಂದಣಿ ಪ್ರಾರಂಭ : ಅ.18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನ. 7, 2022
ಪೂರ್ವಭಾವಿ ಪರೀಕ್ಷೆಯ ಕಾಲ್ಲೆಟರ್ ಡೌನ್ಲೋಡ್ : ನವೆಂಬರ್/ ಡಿಸೆಂಬರ್ 2022
ವೆಬ್ಸೈಟ್: https://www.sbi.co.in/web/careers.