Saturday, December 10, 2022
spot_img
Homeರಾಜ್ಯಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐಗೆ ಸೇರಿದ ಐವರ ಬಂಧನ

ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐಗೆ ಸೇರಿದ ಐವರ ಬಂಧನ

ಮಂಗಳೂರು: ಪಿಎಫ್​ಐ ಸಂಘಟನೆ ನಿಷೇಧದ ಬಳಿಕವೂ ದುಷ್ಕರ್ಮಿಗಳು ವಿಧ್ವಂಸಕಕ್ಕೆ ಸಂಚು ರೂಪಿಸುವುದನ್ನು ಮುಂದುವರಿಸಿದ್ದಾರೆ. ದುಷ್ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಪಿಎಫ್​ಐಗೆ ಸೇರಿದ ಐವರನ್ನು ಇಂದು ಮಂಗಳೂರಿನಲ್ಲಿ ಬಂಧಿಸಲಾಗಿದೆ. 

ಈ ಬಗ್ಗೆ ಮಾತನಾಡಿದ, ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ನಿಷೇಧಿತ ಪಿಎಫ್ಐಗೆ ಸೇರಿದ ಐವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದರು. ವಿಚಾರಣೆ ವೇಳೆ ಆರೋಪಿಗಳು ಯಾರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರು. ಯಾವ ರೀತಿ ಸಂಚು ರೂಪಿಸಿದ್ದರು ಎಂಬ ವಿಚಾರಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದರು.

ತನಿಖೆ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಶಾಂತಿಯೂತ ಪ್ರತಿಭಟನೆ ಮಾಡಿದರೆ ನಮ್ಮ ಕಡೆಯಿಂದ ಯಾವುದೇ ಅಡ್ಡಿ ಇರುವುದಿಲ್ಲ. ಕಾನೂನು ಮೀರಿ ಯಾರಾದರು ಪ್ರತಿಭಟನೆ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪಿಎಫ್​ಐ ಸಂಘಟನೆ ನಿಷೇಧವಾಗಿದ್ದರೂ ಅದರ ಕಾರ್ಯಕರ್ತರ ಮೇಲೆ ನಾವು ಕಣ್ಣು ಇಟ್ಟಿದ್ದೇವೆ. ಕರಾವಳಿ ಭಾಗವಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು, ದಾವಣಗೆರೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ನಮ್ಮ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಲ್ಲಾ ವಿಚಾರಗಳನ್ನು ತನಿಖಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ ಎಂದರು.

LEAVE A REPLY

Please enter your comment!
Please enter your name here

Most Popular

error: Content is protected !!