Thursday, December 1, 2022
spot_img
Homeರಾಜ್ಯನ. 1 ರಂದು ಪುನೀತ್ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ : ಬೊಮ್ಮಾಯಿ

ನ. 1 ರಂದು ಪುನೀತ್ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ : ಬೊಮ್ಮಾಯಿ

ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್, ದಿ. ಪುನೀತ್ ರಾಜ್​ಕುಮಾರ್ ಗೆ ನ. 1ರಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. 

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕುರಿತಂತೆ ಸಭೆ ನಡೆದಿತ್ತು. ನಂತರ ಮಾಧ್ಯಮದವರೊಂದಿಗೆ ಸಿಎಂ ಬೊಮ್ಮಾಯಿ, ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನ. ಯುವಜನತೆಗೆ ಸದಾ ಪ್ರೇರಣೆ ನೀಡುತ್ತಿದ್ದರು. ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ ಎಂದರು.

ನ. 1ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ನ. 1ರ ನಂತರ ಬೆಂಗಳೂರಿನಲ್ಲಿ 10 ದಿನಗಳ ಅಂತರದಲ್ಲಿ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಿದ್ದೇವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.

LEAVE A REPLY

Please enter your comment!
Please enter your name here

Most Popular

error: Content is protected !!