ಮಂಗಳೂರು: ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣನಾಗಿದ್ದ ಪೊಲೀಸ್ ಕಾನ್‌ಸ್ಟೆಬಲ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಕಾನ್‌ಸ್ಟೆಬಲ್ ಆಗಿದ್ದ ಬಜ್ಪೆ ಸಿದ್ಧಾರ್ಥ ನಗರದ ಪ್ರವೀಣ್ ಸಾಲ್ಯಾನ್ (35) ಆರೋಪಿ.
ಏಳು ವರ್ಷದ ಹಿಂದೆ ಫೇಸ್‌ಬುಕ್‌ನಲ್ಲಿ ಪರಿಚಿತಳಾಗಿದ್ದ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಅಶ್ಲೀಲ ಸಂಭಾಷಣೆ ನಡೆಸುತ್ತಿದ್ದ. ನಂತರ ಬಾಲಕಿಯನ್ನು ಬೆದರಿಸಿ 1 ಲ.ರೂ.ಗೆ ಬೇಡಿಕೆ ಇಟ್ಟಿದ್ದ. ಇದರಿಂದ ಮನನೊಂದಿದ್ದ ಬಾಲಕಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪ್ರಕರಣ ಬೆಳಕಿಗೆ ಬಂದ ಬಳಿಕ ಪ್ರವೀಣ್ ಅಮಾನತುಗೊಂಡಿದ್ದ. ಅವನ ವಿರುದ್ಧ ಪೋಕ್ಸೊ ಕಾಯಿದೆಯಡಿ ಕೇಸ್ ದಾಖಲಾಗಿತ್ತು.