ಹೊಸದಿಲ್ಲಿ: ಅರುಣಾಚಲ ಪ್ರದೇಶದ ಅಪ್ಪರ್ ಸಿಯಂಗ್ ಜಿಲ್ಲೆಯ ಮಿಗ್ಗಿಂಗ್ ಎಂಬ ಹಳ್ಳಿ ಸಮೀಪ ದಟ್ಟರಾಣ್ಯದಲ್ಲಿ ಸೇನೆಯ ಹೆಲಿಕಾಪ್ಟರ್ ಶುಕ್ರವಾರ ಬೆಳಗ್ಗೆ ಪತನಗೊಂಡಿದೆ.
ಎಚ್‌ಎಎಲ್ ರುದ್ರ ಶ್ರೇಣಿಗೆ ಸೇರಿದ ಈ ಹೆಲಿಕಾಪ್ಟರ್ ಅತ್ಯಾಧುನಿಕವಾಗಿದ್ದು, ಶಸ್ತ್ರ ವ್ಯವಸ್ಥೆಯನ್ನೂ ಹೊಂದಿತ್ತು. ಹೆಲಿಕಾಪ್ಟರ್‌ನಲ್ಲಿ ಎಷ್ಟು ಮಂದಿ ಇದ್ದರು, ಅವರ ಪರಿಸ್ಥಿತಿ ಏನಾಗಿದೆ ಎಂಬೆಲ್ಲ ಮಾಹಿತಿ ಲಭ್ಯವಾಗಿಲ್ಲ. ಸೇನೆಯ ರಕ್ಷಣಾ ತಂಡ ಘಟನಾ ಸ್ಥಳಕ್ಕೆ ಧಾವಿಸಿದೆ
ಅರುಣಾಚಲ ಪ್ರದೇಶದ ದಟ್ಟಾರಣ್ಯದಲ್ಲಿ ಸೇನೆಯ ಹೆಲಿಕಾಪ್ಟರ್ ಪತನ
