ತ್ಯಾಜ್ಯ ನಿರ್ವಹಣಾ ಘಟಕದ ಬಗ್ಗೆ ಮೆಚ್ಚುಗೆ
ನಿಟ್ಟೆ: ತ್ಯಾಜ್ಯ ನಿರ್ವಹಣೆ ಅಧ್ಯಯನ ಕುರಿತಾಗಿ ನಿಟ್ಟೆ ಗ್ರಾಮ ಪಂಚಾಯತಿಗೆ ಅ.20 ರಂದು ಪಶ್ಚಿಮ ಬಂಗಾಳದಿಂದ ರಾಜ್ಯ ಮಟ್ಟದ ಅಧಿಕಾರಿಗಳ ತಂಡ ಭೇಟಿ ನೀಡಿತು. ಪಂಚಾಯತಿ ವ್ಯಾಪ್ತಿಯ ತ್ಯಾಜ್ಯ ನಿರ್ವಹಣಾ ಕೇಂದ್ರ, ಎಂಆರ್ ಎಫ್ ಘಟಕ ಮತ್ತು ಗೋಭರ್ ಧನ್ ಘಟಕಕ್ಕೆ ಭೇಟಿ ನೀಡಿದ್ದು ಅಲ್ಲಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಸತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪಂಚಾಯತ್ ಸದಸ್ಯರು ಹಾಗೂ ಮತ್ತಿತರು ಉಪಸ್ಥಿತರಿದ್ದರು.