200 ಕೋ.ರೂ. ವಂಚನೆ ಪ್ರಕರಣ: ಇಂದು ನಟಿ ಜಾಕ್ವೆಲಿನ್‌ ಅರ್ಜಿ ವಿಚಾರಣೆ

200 ಕೋ.ರೂ. ವಂಚನೆ ಪ್ರಕರಣ: ಇಂದು ನಟಿ ಜಾಕ್ವೆಲಿನ್‌ ಅರ್ಜಿ ವಿಚಾರಣೆ
ಹೊಸದಿಲ್ಲಿ : ವಂಚಕ ಸುಕೇಶ್ ಚಂದ್ರಶೇಖರನ 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯವೊಂದು ಶನಿವಾರ ನಡೆಸಲಿದೆ.
ಕಳೆದ ವಿಚಾರಣೆ ವೇಳೆಯಲ್ಲಿ ಜಾಕ್ವೆಲಿನ್‌ಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಜಾಕ್ವೆಲಿನ್ ಫರ್ನಾಂಡಿಸ್ ಇಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಅವರ ಪರ ವಕೀಲ ಪ್ರಶಾಂತ್ ಪಾಟೀಲ್ ಎಎನ್ ಐ ಸುದ್ದಿಸಂಸ್ಥೆಗೆ ಖಚಿತಪಡಿಸಿದ್ದಾರೆ.
ಜಾಕ್ವೆಲಿನ್ ಅವರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರು ಇಂದಿನವರೆಗೂ ರೂ. 50,000 ಜಾಮೀನು ಬಾಂಡ್‌ನಲ್ಲಿ ಮಧ್ಯಂತರ ಜಾಮೀನು ನೀಡಿದ್ದರು.
200 ಕೋಟಿ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಆಗಸ್ಟ್ 17, 2022 ರಂದು ದೆಹಲಿ ನ್ಯಾಯಾಲಯದಲ್ಲಿ ಆರೋಪಿ ಸುಖೇಶ್ ಚಂದ್ರಶೇಖರ್ ವಿರುದ್ಧ ಜಾರಿ ನಿರ್ದೇಶನಾಲಯ ಸಲ್ಲಿಸಿದ ಪೂರಕ ಆರೋಪಪಟ್ಟಿಯಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಹೆಸರನ್ನು ಆರೋಪಿ ಎಂದು ಉಲ್ಲೇಖಿಸಲಾಗಿದೆ.
ಪ್ರಸ್ತುತ ಪ್ರಕರಣದ ಎಲ್ಲಾ ಆರೋಪಿಗಳಿಗೆ ದೋಷಾರೋಪ ಪಟ್ಟಿಯ ಪ್ರತಿಯನ್ನು ನೀಡುವಂತೆಯೂ ಕೋರ್ಟ್ ಇಡಿಗೆ ಸೂಚಿಸಿದೆ.
ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ತನಿಖೆಯ ಉದ್ದೇಶಕ್ಕಾಗಿ ಇಡಿ ಹಲವು ಬಾರಿ ಸಮನ್ಸ್ ನೀಡಿದೆ. ಇಂದು ಜಾಮೀನು ಅರ್ಜಿ ತಿರಸ್ಕೃತವಾದರೆ ನಟಿ ಸೆರೆಯಾಗುವ ಸಾಧ್ಯತೆಯಿದೆ.















































































































































error: Content is protected !!
Scroll to Top