ಬಸ್‌-ಟ್ರಕ್‌ ಡಿಕ್ಕಿ : 15 ಸಾವು

ತಡರಾತ್ರಿ ಸಂಭವಿಸಿದ ಅಪಘಾತ

ಭೋಪಾಲ : ಮಧ್ಯ ಪ್ರದೇಶದ ರೇವಾ ಸಮೀಪ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 15 ಮಂದಿ ಸಾವಿಗೀಡಾಗಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದು ಈ ಭೀಕರ ಅಪಘಾತದ ಸಂಬವಿಸಿದೆ.
ಮೃತರೆಲ್ಲ ಕಾರ್ಮಿಕರು ಎಂದು ತಿಳಿದುಬಂದಿದೆ. ಗಾಯಗೊಂಡ 40 ಮಂದಿಯಲ್ಲಿ 20 ಮಂದಿಯನ್ನು ಪ್ರಯಾಗರಾಜ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಬಸ್ ಹೈದರಾಬಾದ್‌ನಿಂದ ಗೋರಖ್‌ಪುರಕ್ಕೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ ಎಲ್ಲ ಪ್ರಯಾಣಿಕರು ಜನರು ಉತ್ತರ ಪ್ರದೇಶ ನಿವಾಸಿಗಳು ಎಂದು ವರದಿಯಾಗಿದೆ. ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ಬಸ್‌ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Latest Articles

error: Content is protected !!