ಹೊಸ್ಮಾರು : ಶಾಲಾ ಶತಮಾನೋತ್ಸವ ಮನವಿ ಪತ್ರ ಬಿಡುಗಡೆ

ಕಾರ್ಕಳ : ಕರ್ನಾಟಕ ಪಬ್ಲಿಕ್ ಸ್ಕೂಲ್ ಹೊಸ್ಮಾರು ಶತಮಾನೋತ್ಸವ ಸಂಭ್ರಮದ ಮನವಿ ಪತ್ರವನ್ನು ಶನಿವಾರ ಸಚಿವ ವಿ. ಸುನೀಲ್ ಕುಮಾರ್ ಬಿಡುಗಡೆಗೊಳಿಸಿದರು. ಈದು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್‌ ಕುಲಾಲ್‌, ಶತಮಾನೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಪ್ರೇಮ್ ಕುಮಾರ್ ಜೈನ್, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಪ್ರಭಾವತಿ, ಪ್ರೌಢಶಾಲಾ ಉಪಪ್ರಾಂಶುಪಾಲ ದಿವಾಕರ್ ಹೆಗ್ಡೆ, ಗ್ರಾ.ಪಂ. ಸದಸ್ಯರು, ಶತಮಾನೋತ್ಸವ ಆಚರಣ ಸಮಿತಿ ಸದಸ್ಯರು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶತಮಾನೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.

Latest Articles

error: Content is protected !!