ಇಂದು ಬೃಹತ್‌ ಉದ್ಯೋಗ ಮೇಳಕ್ಕೆ ಮೋದಿ ಚಾಲನೆ

10 ಲಕ್ಷ ಮಂದಿಗೆ ಉದ್ಯೋಗ ನೀಡುವ ಗುರಿ

ಹೊಸದಿಲ್ಲಿ: ಇಂದು ನಡೆಯಲಿರುವ ಬೃಹತ್‌ ಉದ್ಯೋಗ ಮೇಳಕ್ಕೆ (ರೋಜ್‌ಗಾರ್‌ ಯೋಜನಾ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಸುಮಾರು 10 ಮಂದಿಗೆ ಉದ್ಯೋಗ ನೀಡುವುದು ಈ ಮೇಳದ ಉದ್ದೇಶ. ಇಂದು ವೀಡಿಯೊ ಕಾನ್ಫರೆನ್ಸ್‌ನಲ್ಲಿ ಉದ್ಯೋಗ ಮೇಳಕ್ಕೆ ಚಾಲನೆ ನೀಡುವ ಮೋದಿ ದಿಲ್ಲಿಯಲ್ಲಿ 75,000 ಮಂದಿಗೆ ಸಾಂಕೇತಿಕವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ.
ಸರಕಾರದ ಎಲ್ಲ ಇಲಾಖೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಈ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಮೊದಲ ಹಂತದಲ್ಲೇ ಸುಮಾರೊ 10 ಲಕ್ಷ ಮಂದಿಗೆ ಅವಕಾಶ ಸಿಗಲಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ.

Latest Articles

error: Content is protected !!