ಕಾರ್ಕಳ: ಶೈಕ್ಷಣಿಕ ಕ್ಷೇತ್ರದಲ್ಲಿ ಹಾಗೂ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡಮಾಡುವ ರೋಟರಿ ಇಂಡಿಯಾ ಲಿಟರಸಿ ಮಿಷನ್ನ ನೇಷನ್ ಬಿಲ್ಡರ್ ಪ್ರಶಸ್ತಿಗೆ ಡಾ.ನಿಟ್ಟೆ ಶಂಕರ ಅಡ್ಯಂತಾಯ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಹಿಂದಿ ಶಿಕ್ಷಕ ಚಂದ್ರ ನಾಯ್ಕ್ ಟಿ. ಇವರು ಭಾಜನರಾಗಿದ್ದಾರೆ.
ರೋಟರಿ ಕ್ಲಬ್ ದಕ್ಷಿಣ ಕುಂದಾಪುರ ವತಿಯಿಂದ ಉಡುಪಿಯ ಹೋಟೆಲ್ ಕಿದಿಯೂರ್ನಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚಂದ್ರ ನಾಯ್ಕ್ ಅವರ ಶಿಕ್ಷಣ, ಸಾಹಿತ್ಯ, ಕಲೆ ಸಾಂಸ್ಕೃತಿಕ ಹಾಗೂ ಸಾಮಾಜಿಕ ರಂಗಗಳಲ್ಲಿನ ಬಹುಮುಖ ಪ್ರತಿಭೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.