ಪೋಷಕರಿಂದ 100 ರೂ. ದೇಣಿಗೆ ಪಡೆಯುವ ಯೋಜನೆಗ ವ್ಯಾಪಕ ವಿರೋಧ

ಖರ್ಚುವೆಚ್ಚಗಳನ್ನು ನಿಭಾಯಿಸಲು ಪ್ರತಿ ತಿಂಗಳು 100 ರೂ. ಸಂಗ್ರಹಿಸಲು ಎಸ್‌ಡಿಎಂಸಿಗೆ ಅನುಮತಿ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅಗತ್ಯವಿರುವ ಖರ್ಚುವೆಚ್ಚಗಳನ್ನು ನಿಭಾಯಿಸುವ ಸಲುವಾಗಿ ಪೋಷಕರಿಂದ ಪ್ರತಿ ತಿಂಗಳು 100 ರೂ. ದೇಣಿಗೆ ರೂಪದಲ್ಲಿ ವಸೂಲು ಮಾಡಲು ಶಾಲಾಭಿವೃದ್ಧಿ ಮಂಡಳಿಗಳಿಗೆ ಅನುಮತಿ ನೀಡಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ನಮ್ಮ ಶಾಲೆ ನಮ್ಮ ಕೊಡುಗೆ ಯೋಜನೆಯಡಿ ಎಸ್‌ಡಿಎಂಸಿಗಳು ಪೋಷಕರಿಂದ ಪ್ರತಿ ತಿಂಗಳು 100 ರೂ. ದೇಣಿಗೆ ಸಂಗ್ರಹಿಸಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಇದು ಉತ್ತಮ ಯೋಜನೆಯೇ ಆಗಿದ್ದರೂ ದೇಣಿಗೆ ಕೊಟ್ಟ ಮತ್ತು ಕೊಡದಿರುವ ಮಕ್ಕಳು ಎಂಬ ಅಂತರ ಸೃಷ್ಟಿಯಾಗುವ ಅಪಾಯವಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಇದು ಕಾಯಂ ಆಗಿ ಶುಲ್ಕದ ರೂಪ ಪಡೆದುಕೊಳ್ಳಬಹುದು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ನಿರ್ವಹಣೆಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಮಾಸಿಕ ಕೊಡುಗೆಯನ್ನು ಪಡೆಯುವ ಮತ್ತು ಆ ಮೂಲಕ ಬಡವರ ಹಾಗೂ ಮಹಿಳಾ ಶಿಕ್ಷಣಕ್ಕೆ ಕುತ್ತು ತರಲಿರುವ, ಸರಕಾರಿ ಸುತ್ತೋಲೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಸಿಪಿಐ(ಎಂ) ಒತ್ತಾಯಿಸಿದೆ.
ಈ ಸುತ್ತೋಲೆ ಸಾರ್ವಜನಿಕ ಶಿಕ್ಷಣವನ್ನು ಹಾಳು ಮಾಡಿ ಖಾಸಗಿ ಶಿಕ್ಷಣವನ್ನು ಬಲಗೊಳಿಸುವ ದುರುದ್ದೇಶ ಹೊಂದಿದೆ ಎಂದು ಆರೋಪಿಸಿದೆ. ಕಮಿಷನ್ ಹೆಸರಲ್ಲಿ ಖಜಾನೆ ಲೂಟಿ, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ!ಕಮಿಷನ್ ಹೆಸರಲ್ಲಿ ಖಜಾನೆ ಲೂಟಿ, ಈಗ ಬಡ ಮಕ್ಕಳ ಪೋಷಕರ ಜೇಬಿಗೂ ಕತ್ತರಿ ಎಂದು ಹೇಳಿದೆ.
ಮುಖ್ಯಮಂತ್ರಿ ಹಾಗೂ ಸಚಿವರ 40 ಪರ್ಸೆಂಟ್ ಕಮಿಷನ್‌ ದಂಧೆಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿದೆ. ಹೀಗಾಗಿ ಶಿಕ್ಷಣ ಇಲಾಖೆಯು ಶಾಲಾ ಮಕ್ಕಳ ಪೋಷಕರಿಂದ ತಿಂಗಳಿಗೆ 100 ರೂಪಾಯಿ ಪಡೆಯುವ ಹಂತಕ್ಕೆ ತಲುಪಿದೆ ಎಂದು ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಮೋಹನ್ ದಾಸರಿ ಆರೋಪಿಸಿದ್ದಾರೆ.
ದಾನಿಗಳಿಂದ ದೇಣಿಗೆ ಸಂಗ್ರಹಿಸಿ ಶೂ ಖರೀದಿಸುವಂತೆ ಈ ಹಿಂದೆ ಆದೇಶ ಹೊರಡಿಸಿತ್ತು. ಈಗ ಡೆಸ್ಕ್‌, ವಿದ್ಯುತ್‌ ಬಿಲ್‌ ಇನ್ನಿತರ ಖರ್ಚುಗಳಿಗಾಗಿ ವಿದ್ಯಾರ್ಥಿಗಳ ಪೋಷಕರಿಂದ ಪ್ರತಿ ತಿಂಗಳು 100 ರೂಪಾಯಿ ಶುಲ್ಕ ಪಡೆಯಲು ಮುಂದಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಶಾಲೆಗಳ ಆಡಳಿತ ಮಂಡಳಿಗಳಿಗೆ ಸುತ್ತೋಲೆ ಹೊರಡಿಸಿ ಆದೇಶಿಸಿದೆ. ಬಿಜೆಪಿ ಆಡಳಿತದಲ್ಲಿ ಮಿತಿಮೀರಿದ ಭ್ರಷ್ಟಾಚಾರದಿಂದ ಸರ್ಕಾರ ದಿವಾಳಿಯಾಗಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ದೂರಿದ್ದಾರೆ.

Latest Articles

error: Content is protected !!