ಸರಕಾರಿ ಶಾಲಾ ಮಕ್ಕಳ ಪೋಷಕರಿಂದ ಹಣ ಸಂಗ್ರಹ ಕ್ರಮ ಖಂಡನೀಯ – ಶುಭದ ರಾವ್‌

ಕಾರ್ಕಳ : ಶಾಲಾಭಿವೃದ್ಧಿ ಹಾಗೂ ಶೈಕ್ಷಣಿಕ ಅಭಿವೃದ್ಧಿ ವೆಚ್ಚಕ್ಕಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಂದ ದಾನ, ದೇಣಿಗೆ ರೂಪದಲ್ಲಿ ಎಸ್‌ಡಿಎಂಸಿಗಳ ಮೂಲಕ ಮಾಸಿಕ ತಲಾ 100 ರೂ. ಹಣ ಸಂಗ್ರಹಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿರುವುದು ಖಂಡನೀಯ ಎಂದು ಕಾರ್ಕಳ ಕಾಂಗ್ರೆಸ್‌ ವಕ್ತಾರ ಶುಭದ ರಾವ್‌ ಹೇಳಿದರು. ರಾಜ್ಯ ಸರಕಾರದ ಈ ನೀತಿಯಿಂದಾಗಿ ಗ್ರಾಮೀಣ ಪ್ರದೇಶದ ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆಯಿದೆ. ಸರಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಂದ ತಿಂಗಳಿಗೆ 100 ರೂ. ಸಂಗ್ರಹಿಸಲು ರಾಜ್ಯ ಬಿಜೆಪಿ ಸರಕಾರ ನಿರ್ಧರಿಸಿರುವುದು ಸರಿಯಲ್ಲ. ಇದರಿಂದ ಗ್ರಾಮೀಣ ಪ್ರದೇಶದ ಬಡವರು, ಶೋಷಿತರು ಮತ್ತು ಹಿಂದುಳಿದ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಆತಂಕವಿದ್ದು, ಈ ಸುತ್ತೋಲೆಯನ್ನು ತಕ್ಷಣ ಹಿಂಪಡೆಯುವಂತೆ ಕಾಂಗ್ರೇಸ್ ವಕ್ತಾರ ಶುಭದರಾವ್ ಸರಕಾರವನ್ನು ಆಗ್ರಹಿಸಿದ್ದಾರೆ.

ಹಣ ಲೂಟುವ ಯೋಜನೆ
ಕಾಂಗ್ರೇಸ್ ಸರಕಾರವಿದ್ದಾಗ ಬಡ ಮಕ್ಕಳ ಶಿಕ್ಷಣಕ್ಕೆ ಒತ್ತುಕೊಟ್ಟು ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಅನೇಕ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಹಾಲು, ಊಟ, ಸಮವಸ್ತ್ರ, ಶೂ, ಹಾಸ್ಟೆಲ್ ಮತ್ತು ವಿದ್ಯಾಸಿರಿಗಳಂತ ಯೋಜನೆಗಳ ಮೂಲಕ ಮಕ್ಕಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ, ಬಿಜೆಪಿ ಸರಕಾರವು ಬಡ ಮಕ್ಕಳನ್ನೂ ಗುರಿಯಾಗಿಸಿಕೊಂಡು ಅವರ ಪೋಷಕರ ಕಷ್ಟದ ಸಂಪಾದನೆಯ ಮೇಲೆ ಕಣ್ಣಿಟ್ಟು ಹಣ ಲೂಟುವ ಮತ್ತೊಂದು ಯೋಜನೆ ಹಾಕಿಕೊಂಡಿದೆ ಎಂದೆನಿಸುತ್ತದೆ ಎಂದು ಶುಭದ ರಾವ್ ಆಕ್ರೋಶ ವ್ಯಕ್ತಪಡಿಸಿದರು.

Latest Articles

error: Content is protected !!