ಆರೋಗ್ಯ ಕಾಪಾಡಲು ಕ್ರೀಡೆ ಸಹಕಾರಿ – ಸುಮಾ ಕೇಶವ್
ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಎಸ್.ವಿ.ಟಿ. ವನಿತಾ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಇದರ ಸಹಯೋಗದಲ್ಲಿ ಕಾರ್ಕಳ ತಾಲೂಕು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಅ. 21ರಂದು ತಾಲೂಕು ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಪುರಸಭಾ ಅಧ್ಯಕ್ಷೆ ಸುಮಾ ಕೇಶವ್ ಕ್ರೀಡಾ ಜ್ಯೋತಿ ಬೆಳಗಿಸಿದರು. ಬಳಿಕ ಮಾತನಾಡಿದ ಅವರು ಕ್ರೀಡೆ ಆರೋಗ್ಯ ಕಾಪಾಡುವಲ್ಲಿ ಸಹಕಾರಿ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು. ಸೋಲು ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಬೇಕೆಂದರು.

ಎಸ್.ವಿ. ಎಜುಕೇಶನ್ ಟ್ರಸ್ಟ್‌ನ ಕೋಶಾಧಿಕಾರಿ ಐ. ರವೀಂದ್ರನಾಥ ಪೈ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಯ್ಯ ಜಿ., ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ, ಎಸ್.ವಿ.ಟಿ. ಪ್ರೌಢಶಾಲೆಯ ಮುಖ್ಯಶಿಕ್ಷಕ ಯೋಗೇಂದ್ರ ಕಾಮತ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮದಾಸ್ ಪ್ರಭು, ಕ.ರಾ.ದೈ.ಶಿ. ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ರಾಜಾರಾಮ ಶೆಟ್ಟಿ, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಜೈನ್, ತಾಲೂಕು ಘಟಕದ (ಪ್ರೌಢಶಾಲಾ ವಿಭಾಗ) ಅಧ್ಯಕ್ಷೆ ಯಶೋದಾ ಶೆಟ್ಟಿ, ತಾಲೂಕು ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ ರಾವ್ ಇನ್ನಾ, ಕ.ರಾ.ಸ.ಶಿ. ಸಂಘದ ತಾಲೂಕು ಅಧ್ಯಕ್ಷ ಮಹೇಶ್ ನಾಯಕ್, ತಾಲೂಕು ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಪ್ರಿಯಾ ಪ್ರಭು ಉಪಸ್ಥಿತರಿದ್ದರು. ಉಪನ್ಯಾಸಕ ಸುನಿಲ್ ಎಸ್. ಶೆಟ್ಟಿ ಸ್ವಾಗತಿಸಿ, ದೇವದಾಸ್ ಕೆರೆಮನೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.