ಕ್ರಿಕೆಟ್‌ : ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಗೆಲುವು

ಮೆಲ್ಬೋರ್ನ್ : ಮೆಲ್ಬೊರ್ನ್‌ ನಲ್ಲಿ ನಡೆದ ಭಾರತ ಪಾಕಿಸ್ಥಾನ ನಡುವಿನ ಕ್ರಿಕೆಟ್‌ ಪಂದ್ಯಾಟದಲ್ಲಿ ಭಾರತ ವಿರೋಚಿತ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ಥಾನವು 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 159 ರನ್ ಗಳಿಸಿದರೆ, ಭಾರತ 6 ಕಳೆದುಕೊಂಡು ಅಂತಿಮ ಎಸೆತದಲ್ಲಿ ವಿಜಯದ ನಗೆ ಬೀರಿದೆ.
2 ಹಂತದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಬಾರಿಸಿತ್ತು. ಆರಂಭಿಕ ಆಘಾತ ಎದುರಿಸಿದ ಪಾಕಿಸ್ತಾನಕ್ಕೆ ಶಾನ್ ಮಸೂದ್ ಅಜೇಯ 52 ರನ್ ಹಾಗೂ ಇಫ್ತಿಕರ್ ಅಹ್ಮದ್ 51 ರನ್ ಪೇರಿಸುವ ಮೂಲಕ ತಂಡಕ್ಕೆ ಚೇತರಿಕೆ ತಂದುಕೊಟ್ಟಿದ್ದರು. ಪಾಕ್ ಭಾರತಕ್ಕೆ ಗೆಲ್ಲಲು 160 ರನ್ ಗಳ ಗುರಿ ನೀಡಿದ್ದು, ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಮಾಜಿ ನಾಯಕ ವಿರಾಟ್ ಕೊಹ್ಲಿ ಅಜೇಯ 82 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿದರು. ಆರಂಭಿಕರಾದ ಕೆ.ಎಲ್. ರಾಹುಲ್ 4 ಮತ್ತು ರೋಹಿತ್ ಶರ್ಮಾ 4 ರನ್ ಗಳಿಗೆ ಔಟಾಗಿದ್ದು ನಿರಾಶೆ ಮೂಡಿಸಿದರು. ಈ ವೇಳೆ ತಾಳ್ಮೆಯ ಆಟವಾಡಿದ ಕೊಹ್ಲಿ ತಂಡವನ್ನು ಗೆಲುವಿನ ಹಾದಿಯತ್ತ ಕೊಂಡೊಯ್ದರು. ಇವರೊಂದಿಗೆ ಹಾರ್ದಿಕ್ ಪಾಂಡ್ಯ 40 ರನ್ ಬಾರಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.error: Content is protected !!
Scroll to Top