Thursday, December 1, 2022
spot_img
HomeUncategorizedಪ್ರೌಢಶಾಲಾ ವಿಭಾಗದ ಕ್ರೀಡಾಕೂಟ

ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಎಸ್.ವಿ.ಟಿ. ವನಿತಾ ಪ್ರೌಢ ಶಾಲಾ ವಿಭಾಗ ಆತಿಥ್ಯದಲ್ಲಿ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ತಾಲೂಕು ಮಟ್ಟದ ಕ್ರೀಡಾಕೂಟ ನಡೆಯಿತು. ಕಾರ್ಕಳ ಶ್ರೀ ವೆಂಕಟರಮಣ ದೇವಳದ ಒಂದನೇ ಮೊಕ್ತೇಸರ ಕೆ. ಜಯರಾಮ ಪ್ರಭು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಎಸ್. ವಿ ಎಜ್ಯುಕೇಶನ್ ಟ್ರಸ್ಟ್ ನ ಕೋಶಾಧಿಕಾರಿ ಐ. ರವೀಂದ್ರನಾಥ ಪೈ, ಲೆಕ್ಕಪರಿಶೋಧಕ ಕೆ.ಕೆ. ಕಾಮತ್, ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷ ಮೋಹನ್ ಶೆಣೈ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ, ಕಾಲೇಜಿನ ಪ್ರಾಚಾರ್ಯ ರಾಮದಾಸ ಪ್ರಭು, ಮುಖ್ಯಶಿಕ್ಷಕ ಯೋಗೇಂದ್ರ ನಾಯಕ್, ತಾಲೂಕು ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಪ್ರಿಯಾ ಪ್ರಭು, ಕೂಡಬೆಟ್ಟು ಮಾಳ ಮುಖ್ಯಶಿಕ್ಷಕ ಶಿಶುಪಾಲ ಹೆಗ್ಡೆ, ಎಸ್‌ಡಿಎಂಸಿ ಅಧ್ಯಕ್ಷ ಸಂದೀಪ ಸೇರ್ವೆಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ರಾಮದಾಸ ಪ್ರಭು ಸ್ವಾಗತಿಸಿ, ಶಿಕ್ಷಕ ದೇವದಾಸ್ ಕೆರೆಮನೆ ನಿರೂಪಿಸಿದರು. ಮುಖ್ಯಶಿಕ್ಷಕ ಯೋಗೇಂದ್ರ ನಾಯಕ್ ವಂದಿಸಿದರು.
ಓಟ, ಎತ್ತರ ಜಿಗಿತ, ಉದ್ದ ಜಿಗಿತ, ರಿಲೇ, ಗುಂಡು ಎಸೆತ, ಈಟಿ ಎಸೆತ ಸೇರಿದಂತೆ ವಿವಿಧ ಬಗೆಯ ಸ್ಪರ್ಧೆಗಳು ಜರಗಿತು. 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಎಸ್.ವಿ.ಟಿ. ವನಿತಾ ಪದವಿ ಪೂರ್ವ ಕಾಲೇಜಿನ ಕನ್ನಡ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಬಾಲಕೀಯರ ವಿಭಾಗದಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಪಡೆಯಿತು.
17ರ ವಯೋಮಾನದ ಬಾಲಕರ ಹಾಗೂ ಬಾಲಕೀಯರ ವಿಭಾಗದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಮಗ್ರ ತಂಡ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿತು.

LEAVE A REPLY

Please enter your comment!
Please enter your name here

Most Popular

error: Content is protected !!