Thursday, December 1, 2022
spot_img
Homeಸುದ್ದಿಇಂಜಿನಿಯರ್‌ ಯುವತಿ ಮೇಲೆ 10 ಮಂದಿಯಿಂದ ಅತ್ಯಾಚಾರ

ಇಂಜಿನಿಯರ್‌ ಯುವತಿ ಮೇಲೆ 10 ಮಂದಿಯಿಂದ ಅತ್ಯಾಚಾರ

ಬೆಂಗಳೂರು ಮೂಲದ ಸಾಫ್ಟ್‌ವೇರ್‌ ಕಂಪನಿಯ ಉದ್ಯೋಗಿ

ಹೊಸದಿಲ್ಲಿ : ಬೆಂಗಳೂರು ಮೂಲಕ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ 26 ವರ್ಷದ ಇಂಜಿನಿಯರ್‌ ಯುವತಿ ಮೇಲೆ 10 ಜನರು ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.
ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚೈಬಾಸಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗುರುವಾರ ಸಂಜೆ ನಿರ್ಜನ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ಯುವತಿ ತನ್ನ ಸ್ನೇಹಿತನೊಂದಿಗೆ ಇದ್ದಳು. ಹತ್ತು ಜನರ ಗುಂಪೊಂದು ಆಕೆಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗುರುವಾರ ಸಂಜೆ ತನ್ನ ಸ್ನೇಹಿತನೊಂದಿಗೆ ಏರೋಡ್ರಮ್‌ ಪ್ರದೇಶಕ್ಕೆ ತೆರಳಿದ್ದಳು. ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ, ದುಷ್ಕರ್ಮಿಗಳು ತಡೆದು ಆಕೆಯ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಆ ನಂತರ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಪಶ್ಚಿಮ ಸಿಂಗ್‌ಭೂಮ್ ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ತಿಳಿಸಿದ್ದಾರೆ. ಜಿಂಕ್‌ಪಾನಿ ಪ್ರದೇಶದ ನಿವಾಸಿಯಾಗಿರುವ ಮಹಿಳೆ ಬೆಂಗಳೂರು ಮೂಲದ ಟೆಕ್‌ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿದ್ದಾರೆ. ಜಿಲ್ಲಾ ಕೇಂದ್ರವಾದ ಚೈಬಾಸಾದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here

Most Popular

error: Content is protected !!