ಕಲುಷಿತ ನೀರು ಸೇವಿಸಿ 50 ಮಂದಿ ಅಸ್ವಸ್ಥ

ನಲ್ಲಿ ನೀರಿಗೆ ಚರಂಡಿ ನೀರು ಮಿಕ್ಸ್‌

ಬೆಳಗಾವಿ : ಕೊಳವ ೆಮೂಲಕ ಪೂರೈಸಿದ ಕಲುಷಿತ ನೀರು ಸೇವಿಸಿ 50ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿರಬೇಕಾದ ಗ್ರಾಮದಲ್ಲಿ ಈಗ ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ.
ನಲ್ಲಿಗಳಿಗೆ ನೀರು ಪೂರೈಸುವ ಪೈಪ್‌ಲೈನ್ ಒಡೆದು ಚರಂಡಿ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುತ್ತಿದ್ದು, ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾಗಿದೆ. 3 ದಿನಗಳ ಅಂತರದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರ ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡಿರುವ ಗ್ರಾಮಸ್ಥರನ್ನು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಈ ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಅಸ್ವಸ್ಥರ ಕುಟುಂಬಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Latest Articles

error: Content is protected !!