ಆಯುಷ್ಮಾನ್‌ ನೋಂದಣಿ: ಕಾರ್ಕಳ ತಾಲೂಕು ರಾಜ್ಯದಲ್ಲೇ ಪ್ರಥಮ

ಉಡುಪಿ ಜಿಲ್ಲೆಗೂ ಪ್ರಥಮ ಪ್ರಶಸ್ತಿ

ಕಾರ್ಕಳ: ಮೈಸೂರು ಜಿಲ್ಲೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಕಳ ತಾಲೂಕು ಆಯುಷ್ಮಾನ್‌ ಭಾರತ್‌ಗೆ ಅತಿಹೆಚ್ಚು ಹೆಲ್ತ್ ರೆಕಾರ್ಡ್‌ಗಳನ್ನು ಲಿಂಕ್ ಮಾಡಿಸಿದ ತಾಲೂಕು ಎಂದು ಪ್ರಥಮ ಪ್ರಶಸ್ತಿ ಗಳಿಸಿಕೊಂಡಿದೆ. ಇದರೊಂದಿಗೆ ಉಡುಪಿ ಜಿಲ್ಲೆ ಆರೋಗ್ಯ ಕ್ಷೇತ್ರದಲ್ಲಿ ಹಲವು ಪ್ರಶಸ್ತಿಗಳನ್ನು ಗಳಿಸಿಕೊಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಾ.ಸುಧಾಕರ್‌ ಪ್ರಶಸ್ತಿಗಳನ್ನು ಪ್ರದಾನಿಸಿದ್ದಾರೆ.
ರಾಜ್ಯದಲ್ಲಿ ಅತಿಹೆಚ್ಚು ಫಲಾನುಭವಿಗಳಿಗೆ ಆಯುಷ್ಮಾನ್‌ ಕಾರ್ಡ್ ವಿತರಿಸಿ ಜಿಕೀರ್ತಿಗೆ ಪ್ರಥಮ ಪ್ರಶಸ್ತಿ ಉಡುಪಿ ಜಿಲ್ಲೆಯ ಪಾಲಾಗಿದೆ.
ಜನರ ಸಹಕಾರದಿಂದ ಪ್ರಶಸ್ತಿ ದೊರೆತಿದ್ದು, ಸಹಕಾರದಿಂದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ ಹಾಗೂ ಇದೇ ರೀತಿ ಮುಂದಿನ ದಿನಗಳಲ್ಲಿ ಉಳಿದ ಎಲ್ಲಾ ವಿಭಾಗಗಳಲ್ಲು ಉಡುಪಿ ಜಿಲ್ಲೆಯನ್ನು ಪ್ರಥಮ ಸ್ಥಾನದಲ್ಲಿ ಇರಿಸಲು ತಮ್ಮೆಲ್ಲರ ಸಹಕಾರವನ್ನು ಕೋರುತ್ತೇನೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Latest Articles

error: Content is protected !!