Thursday, December 1, 2022
spot_img
Homeಸುದ್ದಿಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಹೊಸ ಸಮಿತಿ ರಚನೆ

ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಹೊಸ ಸಮಿತಿ ರಚನೆ

ಮೊದಲ ದಿನವೇ ಬದಲಾವಣೆ ಶುರು

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಿಗೆ ಮಲ್ಲಿಕಾರ್ಜುನ ಖರ್ಗೆ ಬದಲಾವಣೆ ಪರ್ವ ಶುರು ಮಾಡಿದ್ದಾರೆ. ಮೊದಲ ದಿನವೇ ಮಹತ್ವದ ಸಭೆ ಕೈಗೊಂಡು ಈ ಹಿಂದಿನ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ರದ್ದು ಮಾಡಿ ನೂತನ ಪರ್ಯಾಯ ಸಮಿತಿ (ಸ್ಟೀರಿಂಗ್ ಕಮಿಟಿ)ಯನ್ನು ರಚಿಸಿದ್ದಾರೆ.
ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಸೇರಿದಂತೆ 47 ಸದಸ್ಯರನ್ನೊಳಗೊಂಡ ಚಾಲನಾ ಸಮಿತಿ (ಸ್ಟೀರಿಂಗ್ ಸಮಿತಿ)ಯನ್ನು ರಚಿಸಿದ್ದಾರೆ. ಈ ಸಮಿತಿಯು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ ಸ್ಥಾನದಲ್ಲಿ ಕಾರ್ಯ ನಿರ್ವಹಿಸಲಿದೆ. ಸರ್ವಸದಸ್ಯರ ಅಧಿವೇಶನ ನಡೆಯುವವರೆಗೆ ಕಾರ್ಯನಿರ್ವಹಿಸುತ್ತದೆ ಮತ್ತು ಮುಂದಿನ ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಅಧಿವೇಶನದಲ್ಲಿ ಕಾರ್ಯಕಾರಿ ಸಮಿತಿಯ ಹೊಸ ಸದಸ್ಯರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ.
ಹಿಂದಿನ ಸಿಡಬ್ಲ್ಯುಸಿ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳು ಕಾಂಗ್ರೆಸ್ ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಎಐಸಿಸಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!