ಕುಕ್ಕುಂದೂರು: ಆರೋಗ್ಯ ಕೇಂದ್ರಕ್ಕೆ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಭೇಟಿ

ಕಾರ್ಕಳ: ಕುಕ್ಕುಂದೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅ.28ರಂದು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್. ಅನಿರೀಕ್ಷಿತವಾಗಿ ಭೇಟಿ ನೀಡಿ ಕೇಂದ್ರದ ಕಾರ್ಯವೈಖರಿಯ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಜರುಗಿದ ಆಶಾಕಾರ್ಯಕರ್ತೆಯರ ಸಭೆಯಲ್ಲಿ ಮಾತನಾಡಿದ ಅವರು, ಲೋಕ್ ಅದಾಲತ್‌ ಬಗ್ಗೆ ಮಾಹಿತಿ ನೀಡಿ‌, ಕಾರ್ಯಕರ್ತೆಯರು ಕ್ಷೇತ್ರ ಭೇಟಿಯ ಸಮಯದಲ್ಲಿ ಸಮಸ್ಯೆ ಕಂಡುಬಂದಲ್ಲಿ NALSA ಲೀಗಲ್‌ ಸರ್ವೀಸ್‌ ಆ್ಯಪ್ ಮೂಲಕ ನೋಂದಣಿ ಮಾಡಿಕೊಂಡು ನೇರವಾಗಿ ವಕೀಲರಿಗೆ ದೂರು ದಾಖಲಿಬಹುದು ಎಂದರು. ಈ ಸಂದರ್ಭದಲ್ಲಿ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಪ್ರತೀಕ್ಷಾ ಸಿ. ಶೆಟ್ಟಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಅನಂತ ಪಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರುಣ್‌ ಕುಮಾರ್‌ ಹಾಗೂ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.













































error: Content is protected !!
Scroll to Top