ಅ.29: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಬೃಹತ್ ತಿರಂಗ ರ್‍ಯಾಲಿ

ಕಾರ್ಕಳದಲ್ಲಿ ನಡೆಯಲಿದೆ ಸಾರ್ವಜನಿಕ ಸಭೆ

ಉಡುಪಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಬೃಹತ್ ತಿರಂಗ ಬೈಕ್ ಜಾಥಾವನ್ನು ಅ. 29 ರಂದು ಮಧ್ಯಾಹ್ನ ಸಮಯ 2ಕ್ಕೆ ನಡೆಸಲಾಗುತ್ತದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರ ಪಾಲ್ ಹೇಳಿದರು. ಗುರುವಾರ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಕ್ ಜಾಥಾವು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಇನ್ನಾ ಗ್ರಾ. ಪಂ. ವ್ಯಾಪ್ತಿಯಿಂದ ಆರಂಭಗೊಂಡು, ಬೈಂದೂರು, ಕುಂದಾಪುರ, ಬ್ರಹ್ಮಾವರ ಉಡುಪಿ, ಕಾಪು, ಪಡುಬಿದ್ರೆಯ ಯುವಕರು ಭಾಗವಹಿಸಲಿದ್ದು, ಬೆಳ್ಮಣ್ ಮಾರ್ಗವಾಗಿ ಕಾರ್ಕಳ ತಲುಪಲಿದೆ ಎಂದರು.

ಕಾರ್ಕಳದಲ್ಲಿ ಸಾರ್ವಜನಿಕ ಸಭೆ
ಕಾರ್ಕಳದಲ್ಲಿ ಸಾರ್ವಜನಿಕ ಸಭೆ ನಡೆಯಲಿದ್ದು, ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸರ್ಕಾರದ ಮಾಜಿ ಸಚಿವ ವೀರಪ್ಪ ಮೊಯ್ಲಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣ ಅಲ್ಲವಾರ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಮಾಜಿ ಸಚಿವ ಅಭಯಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಮೊಹಮ್ಮದ್ ನಲಪಾಡ್, ಯುವ ನಾಯಕ ಮಿಥುನ್ ರೈ ಸೇರಿದಂತೆ ಹಲವಾರು ರಾಜ್ಯ ನಾಯಕರು ಭಾಗವಹಿಸಲಿದ್ದು, ಬೈಕ್ ಜಾಥಾದಲ್ಲಿ ಜಿಲ್ಲೆಯ 10 ಬ್ಲಾಕ್‌ಗಳಿಂದ ಯುವಕರು ಭಾಗಿಯಾಗಲಿದ್ದಾರೆ ಮತ್ತು ಈಗಾಗಲೇ ಜಾಥಾವನ್ನು ಯಶಸ್ವಿಗೊಳಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಭಾಕರ್ ಬಂಗೇರಾ, ಸದಾಶಿವ ದೇವಾಡಿಗ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೀಪಕ್ ಕೋಟ್ಯಾನ್, ಬ್ಲಾಕ್ ಅಧ್ಯಕ್ಷ ರಮೀಝ್ ಹುಸೇನ್, ಯೋಗಿಶ್ ಆಚಾರ್ಯ ಇನ್ನಾ, ಗುರುಪ್ರಸಾದ್, ಯುವ ಕಾಂಗ್ರೆಸ್ ನ ಅಹಮ್ಮದ್, ಶಬರೀಶ್ ಸುವರ್ಣ, ಪ್ರೀತಿ ಸಾಲಿನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

error: Content is protected !!
Scroll to Top