ಕಾರ್ಕಳ: ತಾಲೂಕು ಆರೋಗ್ಯಾಧಿಕಾರಿ ಕಛೇರಿ, ರಾಷ್ಟ್ರೀಯ ಬಾಯಿಯ ಆರೋಗ್ಯ ಕಾರ್ಯಕ್ರಮ ಹಾಗೂ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ಇವರ ಸಹಯೋಗದಲ್ಲಿ ಅ.28 ರಂದು ಬೆಳ್ಮಣ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ ನಡೆಯಿತು. ತಾಲೂಕು ಆರೋಗ್ಯಾಧಿಕಾರಿ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಮಣ್ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳು, ಸಮುದಾಯ ಆರೋಗ್ಯ ಕೇಂದ್ರ ನಿಟ್ಟೆ, ಕಾರ್ಕಳದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ದಂತ ವೈದ್ಯಾಧಿಕಾರಿಗಳು ಭಾಗವಹಿಸಿದ್ದರು. ಶಿಬಿರದಲ್ಲಿ 61 ಜನರಿಗೆ ದಂತ ಪರೀಕ್ಷೆ ಹಾಗೂ 32 ಜನರಿಗೆ ಸ್ಥಳದಲ್ಲಿಯೇ ದಂತ ಚಿಕಿತ್ಸೆ ನೀಡಲಾಯಿತು.