ಸತತ 23 ವರ್ಷ ಅಧ್ಯಕ್ಷರಾಗಿ ದಾಖಲೆ
ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ಮಾಜಿ ಪ್ರಧಾನಿ 89 ವರ್ಷದ ಎಚ್.ಡಿ.ದೇವೇ ಗೌಡರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶುಕ್ರವಾರ ಅಧಿಕೃತ ಘೋಷಣೆ ಮಾಡಲಾಗಿದೆ.
1999ರಲ್ಲಿ ಪಕ್ಷ ಪ್ರಾರಂಭವಾದಾಗಿನಿಂದ ದೇವೇ ಗೌಡರೇ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. 23 ವರ್ಷ ಅಧ್ಯಕ್ಷರಾಗಿ ದೇವೆ ಗೌಡರು ದಾಖಲೆಯನ್ನೂ ಮಾಡಿದ್ದಾರೆ. 13 ರಾಜ್ಯಗಳ ಪ್ರತಿನಿಧಿಗಳು ಗೌಡರು ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಉಳಿಯಬೇಕೆಂದು ಒತ್ತಾಯಿಸಿದರು. ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆ, 2024ರ ಸಾರ್ವತ್ರಿಕ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡಿರುವುದರಿಂದ ಜೆಡಿಎಸ್ ಈ ಮಹತ್ವದ ನಿರ್ಣಯ ಕೈಗೊಂಡಿದೆ.








































