ವಿಶ್ವದೆಲ್ಲೆಡೆ ಮೊಳಗಿತು ಕನ್ನಡ ಡಿಂಡಿಮ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಅ. 28ರಂದು 11 ಗಂಟೆಗೆ ವಿಶ್ವೆದೆಲ್ಲೆಡೆ ಕೋಟಿ ಕಂಠ ಗಾಯನದಲ್ಲಿ ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು 6 ಕನ್ನಡ ಗೀತೆಗಳು ಎಲ್ಲೆಡೆ ಮೊಳಗಿತು. ಊರು, ಗ್ರಾಮ, ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರ ಮಾತ್ರವಲ್ಲದೇ ಹೊರ ದೇಶದಲ್ಲೂ ಏಕಕಾಲದಲ್ಲಿ ಕನ್ನಡದ ಕಂಪು ಪಸರಿಸಿತು. ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕೋಟಿ ಕಂಠ ಗಾಯನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂದೇಶ ನೀಡಿದರು. ಸಚಿವ ಸುನೀಲ್‌ ಕುಮಾರ್‌ ಸಂಕಲ್ಪ ಬೋಧಿಸಿದರು.
ಕನ್ನಡದ 6 ಹಾಡು ಹಾಡುವ ಮೂಲಕ ಕನ್ನಡಕ್ಕಾಗಿ ನಾವೆಲ್ಲ ಒಂದು ಎಂದು ಸಾರಿ ಸಾರಿ ಹೇಳುವ ಕಾರ್ಯ ಕೋಟಿ ಕಂಠ ಗಾಯನದ ಮೂಲಕ ಆಗಿದೆ. ಕನ್ನಡ ರಾಜ್ಯೋತ್ಸವ ಸಂದರ್ಭ ಅರ್ಹರಿಗೆ ಪ್ರಶಸ್ತಿ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಅಭಿನಂದನೆ
ಕೋಟಿ ಕಂಠ ಗಾಯನವನ್ನು ಅತ್ಯಂತ ಅಭೂತಪೂರ್ವವಾಗಿ ಸಂಘಟಿಸಿ ಯಶಸ್ವಿಗೊಳಿಸಿದ ಸಚಿವ ಸುನೀಲ್‌ ಕುಮಾರ್‌ ಅವರಿಗೆ ವಿಶೇಷವಾದ ಅಭಿನಂದನೆ ಸಲ್ಲಿಸುವುದಾಗಿ ಸಿಎಂ ಹೇಳಿದರು. ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಹಾಗೂ ಡಿ.ವಿ. ಸದಾನಂದ ಗೌಡ, ಕಂದಾಯ ಸಚಿವ ಆರ್.‌ ಅಶೋಕ್‌, ಸಂಸದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್ ಕಸಾಪ ರಾಜ್ಯಾಧ್ಯಕ್ಷ ಮಹೇಶ್‌ ಜೋಷಿ ಮೊದಲಾದವರು ಉಪಸ್ಥಿತರಿದ್ದರು.





























































































































































































































error: Content is protected !!
Scroll to Top