Saturday, December 10, 2022
spot_img
HomeUncategorizedಅ. 29 : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ - ಪದವಿ ಪ್ರದಾನ

ಅ. 29 : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ – ಪದವಿ ಪ್ರದಾನ

ಕಾರ್ಕಳ : ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ೨೦೨೧-೨೦೨೨ ನೇ ಶೈಕ್ಷಣಿಕ ಸಾಲಿನ ಪದವಿ ಪ್ರದಾನ ಸಮಾರಂಭವು ಅ. 29 ರಂದು ಬೆಳಗ್ಗೆ 9:45 ಗಂಟೆಗೆ ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ನಡೆಯಲಿದೆ. ಅಮೇರಿಕದ ಹ್ಯಾರಿಸ್ಬರ್ಗ್ ನಲ್ಲಿರುವ ಪೆನ್ ಸ್ಟೇಟ್ ವಿಶ್ವವಿದ್ಯಾಲಯದ ಅಕಾಡಮಿಕ್ ಎಫೇರ್ಸ್ & ಎಡ್ಮಿನಿಶ್ಟ್ರೇಶನ್ ನ ಸೀನಿಯರ್ ಅಸೋಸಿಯೇಟ್ ಡೀನ್ ಡಾ. ಒಮಿದ್ ಅನ್ಸಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿರುವರು. 2021-2022 ನೇ ಶೈಕ್ಷಣಿಕ ಸಾಲಿನಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬಿ.ಇ., ಎಂ.ಟೆಕ್ ಹಾಗೂ ಎಂ.ಸಿ.ಎ. ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರೊವಿಶನಲ್ ಡಿಗ್ರಿ ಸರ್ಟಿಫಿಕೇಟ್ ನೀಡಲಾಗುವುದು. ಶೈಕ್ಷಣಿಕ ಸಾಧನೆಗೈದ 32 ವಿದ್ಯಾರ್ಥಿಗಳನ್ನು ಸಮಾರಂಭದಲ್ಲಿ ಗುರುತಿಸಲಾಗುವುದು ಎಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್ಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!