Thursday, December 1, 2022
spot_img
Homeಸುದ್ದಿಸ್ವಾಮೀಜಿ ಆತ್ಮಹತ್ಯೆ : ವೀಡಿಯೊದಲ್ಲಿರುವ ಮಹಿಳೆಗಾಗಿ ಶೋಧ

ಸ್ವಾಮೀಜಿ ಆತ್ಮಹತ್ಯೆ : ವೀಡಿಯೊದಲ್ಲಿರುವ ಮಹಿಳೆಗಾಗಿ ಶೋಧ

ಮಹಿಳೆ ಜತೆ ಸ್ವಾಮೀಜಿ ಮಾತನಾಡಿರುವ ವೀಡಿಯೊ ವೈರಲ್‌

ಬೆಂಗಳೂರು: ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ಕುರಿತ ತನಿಖೆಯನ್ನು ಚುರುಕುಗೊಳಿಸಿರುವ ರಾಮನಗರ ಜಿಲ್ಲಾ ಪೊಲೀಸರು, ಮಹಿಳೆಯೊಬ್ಬರ jತೆ ಸ್ವಾಮೀಜಿ ವೀಡಿಯೊ ಕಾಲ್ ಮಾಡಿ ಮಾತನಾಡಿದ್ದಾರೆ ಎಂದು ಹೇಳಲಾದ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ವೀಡಿಯೊ ಈಗ ವೈರಲ್ ಆಗಿದೆ.
ಮಹಿಳೆಯ ಧ್ವನಿ ವೀಡಿಯೊದಲ್ಲಿ ದಾಖಲಾಗಿದೆ. ಪೊಲೀಸರು ಈ ವೀಡಿಯೊದ ಅಸಲಿಯಾ ಅಥವಾ ನಕಲಿಯಾ ಎಂದು ಪರಿಶೀಲಿಸುತ್ತಿದ್ದಾರೆ. ಮಹಿಳೆ ಸ್ವಾಮೀಜಿ ಆತ್ಮಹತ್ಯೆಗೆ ಪ್ರಚೋದನೆ ನೀಡಿರಬಹುದೇ ಎಂಬ ಅಂಶದ ಬಗ್ಗೆ ಕುರಿತು ತನಿಖೆ ನಡೆಸುತ್ತಿದ್ದಾರೆ. ಸ್ವಾಮೀಜಿಗೆ ಆಪ್ತರಾಗಿದ್ದ ಕಾರು ಚಾಲಕ ಮತ್ತು ಮಠದ ಅರ್ಚಕರ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೀಡಿಯೊ ವೈರಲ್ ಆದ ಬಳಿಕ ವೀಡಿಯೊ ಮಾಡಿದವರು ಯಾರು ಎಂಬುದನ್ನು ಕಂಡುಹಿಡಿಯಲು ಪೊಲೀಸರು ಮೂವರು ಮಹಿಳೆಯರನ್ನು ವಿಚಾರಣೆ ನಡೆಸುತ್ತಿದ್ದಾರೆ.
ಮತ್ತೊಂದು ಆತ್ಮಹತ್ಯೆ ಪತ್ರವನ್ನು ಮಠದವರೇ ಯಾರೋ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ. ಅದನ್ನು ಹಸ್ತಾಂತರಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಪ್ರಾಥಮಿಕ ತನಿಖೆ ಅಂಶಗಳ ಪ್ರಕಾರ, ಸ್ವಾಮೀಜಿ ಕೆಲವು ವೈಯಕ್ತಿಕ ಸಮಸ್ಯೆಗಳ ಒತ್ತಡದಲ್ಲಿದ್ದರು.
ಸೋಮವಾರ ಮುಂಜಾನೆ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದ ಮಠದಲ್ಲಿ ವಾಸದ ಕೋಣೆಯಲ್ಲಿ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೆಲವು ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿ ನೋಟ್ ಬರೆದಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!