Thursday, December 1, 2022
spot_img
Homeರಾಜ್ಯನ.11ರಂದು ಬೆಂಗಳೂರಿಗೆ ಮೋದಿ : ಪ್ರಧಾನಿ ಕಾರ್ಯಕ್ರಮಗಳ ಮಾಹಿತಿ - ಬೊಮ್ಮಾಯಿ

ನ.11ರಂದು ಬೆಂಗಳೂರಿಗೆ ಮೋದಿ : ಪ್ರಧಾನಿ ಕಾರ್ಯಕ್ರಮಗಳ ಮಾಹಿತಿ – ಬೊಮ್ಮಾಯಿ

ಬೆಂಗಳೂರು : ಇದೇ ನ. 11 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೋದಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರಧಾನಿ ಮೋದಿಯವರು ನ. 11 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಹೆಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ದಕ್ಷಿಣ ಭಾರತದಲ್ಲಿ ಮೊದಲ ಹಾಗೂ ಭಾರತದ ಐದನೇ ವಂದೇ ಭಾರತ ಎಕ್ಸ್‌ಪ್ರೆಸ್‍ಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‍ನ ಉದ್ಘಾಟನೆಯನ್ನು ಮಾಡಲಿದ್ದಾರೆ. ಅದೇ ಆವರಣದಲ್ಲಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದಾರೆ ಹಾಗೂ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here

Most Popular

error: Content is protected !!