ಬೆಂಗಳೂರಿನ ಏರ್ಪೋರ್ಟ್ ರಸ್ತೆ ಪ್ಲೈ ಓವರ್​ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವು

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಪ್ಲೈ ಓವರ್​ನಲ್ಲಿ ಬೈಕ್ ಅಪಘಾತದಲ್ಲಿ ಇಬ್ಬರ ಸಾವನ್ನಪ್ಪಿದ್ದಾರೆ. ಎಲಿವೇಟೆಡ್​ ರಸ್ತೆ ಫ್ಲೈಓರ್​ನಿಂದ ಕೆಳಗೆ ಬಿದ್ದು ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಫ್ಲೈಓವರ್​ ತಡೆಗೋಡೆಗೆ ಬೈಕ್ ಸವಾರರು ಡಿಕ್ಕಿಯಾಗಿ ಇಬ್ಬರು ಬೈಕ್ ಕೆಳಗೆ ಬಿದ್ದು ದುರ್ಮರಣ ಹೊಂದಿದ್ದಾರೆ. ಸಾವನ್ನಪ್ಪಿರುವ ಇಬ್ಬರನ್ನು ಉತ್ತರ ಭಾರತ ಮೂಲದ ವಿಕ್ರಮ್(28), ಅಮಿತ್ ಸಿಂಗ್(27) ಎಂದು ಗುರುತಿಸಲಾಗಿದೆ. ಇವರ ಜೊತೆಗಿದ್ದ ಇನ್ನೊಬ್ಬ ವ್ಯಕ್ತಿ ಸೌರಭ್(27) ಸ್ಥಿತಿ ಗಂಭೀರವಾಗಿದ್ದು, ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್​ನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಈ ಇಬ್ಬರ ಮೃತದೇಹವನ್ನು ಸ್ಥಳಾಂತರ ಮಾಡಲಾಗಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Latest Articles

error: Content is protected !!