ಔರಂಗಾಬಾದ್: ಬಿಹಾರದ ಔರಂಗಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಶನಿವಾರ ಮುಂಜಾನೆ ಛಠ್ ಪೂಜೆಯ ಸಂಭ್ರದಲ್ಲಿದ್ದ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಕನಿಷ್ಠ 35 ಜನರು ಗಾಯಗೊಂಡಿದ್ದಾರೆ.
ಅನಿಲ್ ಗೋಸ್ವಾಮಿ ಎಂಬವರ ಕುಟುಂಬ ನಸುಕಿನ 2.30ರ ಸುಮಾರಿಗೆ ಛಠ್ ಪೂಜೆಗಾಗಿ ಅಡುಗೆ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ .
ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿನಂದಿಸಿದೆ. ಆದರೆ, ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿ ದೂರದವರೆಗೆ ಆವರಿಸಿತ್ತು. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.