11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರತಿ ತಿಂಗಳ ಕೊನೆಯ ಭಾನುವಾರ ನಡೆಯುವ ಮನ್ ಕೀ ಬಾತ್ ಕಾರ್ಯಕ್ರಮದ 94ನೇ ಕಂತು ಇದು. ಆಲ್ ಇಂಡಿಯಾ ರೇಡಿಯೋ ಹಾಗೂ ದೂರದರ್ಶನದ ಎಲ್ಲ ನೆಟ್ವರ್ಕ್ಗಳಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ. ಆಲ್ ಇಂಡಿಯಾ ರೇಡಿಯೊ- ಎಐಆರ್ ನ್ಯೂಸ್ ಯೂಟ್ಯೂಬ್ ಚಾನೆಲ್ನಲ್ಲಿಯೂ ನೇರ ಪ್ರಸಾರಗೊಳ್ಳಲಿದೆ. ಎಐಆರ್ ನ್ಯೂಸ್, ಡಿಡಿ ನ್ಯೂಸ್ ಮತ್ತು ವೆಬ್ಸೈಟ್ಗಳಲ್ಲಿಯೂ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮತ್ತು ಮಾಹಿತಿ ಪ್ರಸಾರ ಸಚಿವಾಲಯ ತಿಳಿಸಿದೆ.