Saturday, December 10, 2022
spot_img
Homeಸುದ್ದಿಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ

1 ರಿಂದ ಏಪ್ರಿಲ್ 15ರ ವರೆಗೆ ಪರೀಕ್ಷೆ

ಬೆಂಗಳೂರು: 2022-23ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಶನಿವಾರ ಪ್ರಕಟಿಸಿದೆ.
ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಏಪ್ರಿಲ್ 1 ರಿಂದ ಏಪ್ರಿಲ್ 15ರ ವರೆಗೆ ಪರೀಕ್ಷೆ ನಡೆಯಲಿದೆ. ವೇಳಾಪಟ್ಟಿಗೆ ವಿದ್ಯಾರ್ಥಿಗಳು ಮತ್ತು ‌ಪೋಷಕರು ಆಕ್ಷೇಪಣೆ ಸಲ್ಲಿಸಲು ನವೆಂಬರ್ 2ರ ವರೆಗೆ ಅವಕಾಶ ನೀಡಲಾಗಿದೆ.
ಏಪ್ರಿಲ್ 1 ರಂದು ಪ್ರಥಮ ಭಾಷೆ, ಏಪ್ರಿಲ್ 4 ರಂದು ಗಣಿತ, ಏಪ್ರಿಲ್ 6 ರಂದು ದ್ವಿತೀಯ ಭಾಷೆ, ಏಪ್ರಿಲ್ 10ಕ್ಕೆ ವಿಜ್ಞಾನ, ಏಪ್ರಿಲ್ 12 ರಂದು ತೃತೀಯ ಭಾಷೆ, ಏಪ್ರಿಲ್ 15 ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

LEAVE A REPLY

Please enter your comment!
Please enter your name here

Most Popular

error: Content is protected !!