Saturday, December 10, 2022
spot_img
Homeಸುದ್ದಿಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶ ಸ್ಥಾಪನೆಗೆ ಆದೇಶ

ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶ ಸ್ಥಾಪನೆಗೆ ಆದೇಶ

ಸಿಎಂಗೆ ಸಚಿವ ಸುನೀಲ್‌ ಕುಮಾರ್‌ ಧನ್ಯವಾದ

ಬೆಂಗಳೂರು : ಈಡಿಗ ಸಮುದಾಯದ ಸಮಗ್ರ ಅಭಿವದ್ಧಿಗಾಗಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶವನ್ನು ಸ್ಥಾಪಿಸಲು ಸರ್ಕಾರದ ಆದೇಶಿಸಿದೆ. ಸಮಾಜದ ಆರ್ಥಿಕ ಶೈಕ್ಷಣಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ಅಭಿವೃದ್ಧಿಗೊಳಿಸಲು ವಿಶೇಷ ಅಧಿಕಾರಿಗಳ ನೇಮಕದ ಜತೆಗೆ ಕೋಶದ ನಿರ್ವಹಣೆಗಾಗಿ ವಿಶೇಷ ಅನುದಾನ ಒದಗಿಸಲು ಈ ಆದೇಶದಲ್ಲಿ ಸೂಚಿಸಲಾಗಿದೆ.
ಈಡಿಗ ಸಮಾಜದ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇಂಧನ, ಕನ್ನದ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್‌ ಕುಮಾರ್‌ ಅವರು ಈಡಿಗ ಸುಮದಾಯದ ಪರವಾಗಿ ಧನ್ಯವಾದ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!